ವಿದ್ಯಾರ್ಥಿಗಳ ಪ್ರತಿಭಟನೆ :ಜೆ ಎನ್ ಯು ಸುತ್ತ ನಿಷೇಧಾಜ್ಞೆ ಜಾರಿ..!

ನವದೆಹಲಿ:

    ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾದ  ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ ಹಾಸ್ಟೆಲ್ ಶುಲ್ಕ ಹೆಚ್ಚಳ ಮಾಡಿರುವುನ್ನು ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು ಭದ್ರತೆ ದೃಷ್ಠಿಯಿಂದ ದೆಹಲಿ ಪೊಲೀಸರು ಬಿಗಿ ಬಂದೋ ಬಸ್ತ್ ಮಾಡಿದ್ದಾರೆ.

    ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆ ಸದಸ್ಯರು ಇಂದು ಸಂಸತ್ ಭವನದವರೆಗೆ ಪ್ರತಿಭಟನಾ ಮೆರವಣಿಗೆ ಸಾಗುತ್ತಿದ್ದು ಈ ಸಂದರ್ಭದಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜೆ ಎನ್ ಯು ಮತ್ತು ಸಂಸತ್ ಭವನದ ಸುತ್ತಾ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ವಿಶ್ವವಿದ್ಯಾಲಯದ ಹೊರಗೆ 10 ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದ್ದು ಪ್ರತಿ ತುಕಡಿಯಲ್ಲಿ 70ರಿಂದ 80 ಮಂದಿ ಪೊಲೀಸರಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

  ಇದೊಂದು ದುರದೃಷ್ಟಕರ ಸನ್ನಿವೇಶ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳು ಸಂಸತ್ ಭವನದತ್ತ ಮೆರವಣಿಗೆ ಸಾಗುವಲ್ಲಿ ಬಿಗಿ ಭದ್ರತೆ ಒದಗಿಸಲು ಪೊಲೀಸರು ಮುಂದಾಗಿದ್ದಾರೆ. ಸಂಸತ್ತಿಗೆ ಪ್ರವೇಶಿಸುವ ಮಾರ್ಗದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. 

ಸಮಿತಿ ರಚನೆ:

     ಈ ಮಧ್ಯೆ ವಿದ್ಯಾರ್ಥಿಗಳ ಮತ್ತು ಆಡಳಿತ ಮಂಡಳಿ ನಡುವಿನ ಸಮಸ್ಯೆಗಳನ್ನು ಬಗೆಹರಿಸಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಮೂವರು ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚನೆ ಮಾಡಿದೆ. ಸಮಿತಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಮತ್ತು ಆಡಳಿತಾಧಿಕಾರಿಗಳ ನಡುವೆ ಮಾತುಕತೆ ನಡೆಸಿ ಎಲ್ಲಾ ವಿಷಯಗಳಿಗೆ ಸಂಬಂಧಪಟ್ಟಂತೆ ಶಿಫಾರಸುಗಳನ್ನು ಸಲ್ಲಿಸಲಿದೆ ಎಂದು ಇಲಾಖೆ ತಿಳಿಸಿದೆ.

   ವಿಶ್ವವಿದ್ಯಾಲಯದ ಆಡಳಿತ ವರ್ಗ ಕಳೆದ ಬುಧವಾರ ಶುಲ್ಕ ಹೆಚ್ಚಳದ ಒಂದು ಭಾಗವನ್ನು ಹಿಂದಕ್ಕೆ ಪಡೆಯಲಾಗುವುದು ಎಂದು ಹೇಳಿದರೂ ಕೂಡ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿದ್ದು ಶುಲ್ಕ ಭಾಗಶಃ ಇಳಿಕೆ ಆಡಳಿತ ವರ್ಗದ ಕಣ್ಣೊರೆಸುವ ತಂತ್ರ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap