ನವದೆಹಲಿ:
ಹರ್ಯಾಣ, ದೆಹಲಿ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಆಮ್ ಆದ್ಮಿ ಪಕ್ಷದೊಂದಿಗೆ ಮತ್ರಿ ಮಾಡಿಕೊಳ್ಳುವ ಸಾಧ್ಯತೆಗಳಿಲ್ಲ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.
ಆದರೆ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ಗಳಲ್ಲಿ ವಿಧಾನಸಭಾ ಚುನಾವಣೆಯನ್ನು ಇಂಡಿಯಾ ಮೈತ್ರಿಕೂಟದೊಂದಿಗೆ ಕಾಂಗ್ರೆಸ್ ಎದುರಿಸುತ್ತದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.ಮುಂಬರುವ ವಿಧಾನಸಭಾ ಚುನಾವಣೆಗಳನ್ನು ಎದುರಿಸುವುದಕ್ಕೆ ಕಾಂಗ್ರೆಸ್ ಏಕ ಮಾತ್ರ ಸೂತ್ರಗಳನ್ನು ಬಳಕೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.ಕಾಂಗ್ರೆಸ್ ನಾಯಕರು ಮತ್ತು ಇತರ ಮೈತ್ರಿ ಪಾಲುದಾರರು ಒಪ್ಪುವ ರಾಜ್ಯಗಳಲ್ಲಿ ಜೊತೆಯಾಗಿ ಹೋರಾಡುತ್ತದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.
ಪಂಜಾಬ್ ನಲ್ಲಿ INDIA ಮೈತ್ರಿ ಇಲ್ಲ. ಹರ್ಯಾಣದಲ್ಲಿ ನಾವು ಆಮ್ ಆದ್ಮಿ ಪಕ್ಷಕ್ಕೆ ಲೋಕಸಭಾ ಚುನಾವಣೆಯಲ್ಲಿ 1 ಸ್ಥಾನ ಬಿಟ್ಟುಕೊಟ್ಟಿದ್ದೆವು. ಆದರೆ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದಿಲ್ಲ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.
ಇನ್ನು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಇರುವುದಿಲ್ಲ ಎಂಬುದನ್ನು ಆಮ್ ಆದ್ಮಿ ಪಕ್ಷವೇ ಸ್ಪಷ್ಟಪಡಿಸಿದೆ ಎಂದು ರಮೇಶ್ ತಿಳಿಸಿದ್ದಾರೆ.