ಅಂಗನವಾಡಿ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯೋದಿಲ್ಲ…!

ಬೆಂಗಳೂರು:

    ಅಂಗನವಾಡಿಗಳಲ್ಲಿ LKG, UKG ಆರಂಭಗೊಂಡ ನಂತ್ರ ಅಲ್ಲಿನ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯುತ್ತೇವೆ ಎಂಬುದು ಸತ್ಯಕ್ಕೆ ದೂರವಾದಂತ ಮಾತಾಗಿದೆ. ಯಾರನ್ನೂ ಕೆಲಸದಿಂದ ತೆಗೆಯುವುದಿಲ್ಲ ಎಂಬುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

    ಇಂದು ಸಿಎಂ ಸಿದ್ಧರಾಮಯ್ಯ ಅವರೊಂದಿಗೆ ಸಭೆಯಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೆ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯೂ ಸರ್ಕಾರಿ ಮಾಂಟೆಸರಿ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ‌ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

    ಪೂರ್ವಪ್ರಾಥಮಿಕ ಶಿಕ್ಷಣ ಆರಂಭಿಸುವ ಸಂಬಂಧ ಈಗಾಗಲೇ ಅಂಗನವಾಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಾಗಿದೆ. ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಶಿಕ್ಷಕಿಯರ ಪೈಕಿ 9 ಸಾವಿರ ಮಂದಿ ಪದವಿ ಪಡೆದವರಾಗಿದ್ದರೆ, ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಮಂದಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹೀಗಾಗಿ, ಗುಣಮಟ್ಟದ ಶಿಕ್ಷಣ ನೀಡಿಕೆಗೆ ಯಾವುದೇ ಸಮಸ್ಯೆ ಆಗದು ಎಂದು ಹೇಳಿದ ಸಚಿವರು, ಯಾರನ್ನೂ ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

   ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆಯಲ್ಲಿ ಶಾಲಾ ಮತ್ತು ಪ್ರಾಥಮಿಕ ಶಿಕ್ಷಣದ ಸಚಿವ ಮಧು ಬಂಗಾರಪ್ಪ‌, ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link