ಆಧಾರ್ ಜೋಡಣೆಗೆ ಕೊನೆಯ ದಿನಾಂಕ ನಿಗದಿ ಇಲ್ಲ

ಹುಬ್ಬಳ್ಳಿ:

    ಗೃಹಬಳಕೆ ಅನಿಲ ಸಂಪರ್ಕ ಹೊಂದಿರುವವರು ತಮ್ಮ ಆಧಾರ್ ಬಯೋಮೆಟ್ರಿಕ್ ನೀಡಿ, ಕೆವೈಸಿ ಮಾಡಿಸಿಕೊಳ್ಳಲು ಯಾವುದೇ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ ನಿಗದಿಪಡಿಸಿಲ್ಲ. ತಪ್ಪು ಮಾಹಿತಿ ಅಥವಾ ಸುಳ್ಳು ಸಂದೇಶಗಳನ್ನು ಗ್ರಾಹಕರು ನಂಬಬಾರದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ ಹೆಗ್ಗಳಗಿ ತಿಳಿಸಿದ್ದಾರೆ.

    ಪ್ರಕಟಣೆ ನೀಡಿರುವ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ಸುಳ್ಳು ಸಂದೇಶದಿ೦ದ ಗ್ರಾಹಕರು ಜಿಲ್ಲೆಯಾದ್ಯಂತ ಗ್ಯಾಸ್ ಏಜೆನ್ಸಿಗಳ ಮುಂದೆ ಕೆವೈಸಿ ಮಾಡಿಸಲು ಸಾಲುಗಟ್ಟಿ ನಿಲ್ಲುತ್ತಿರುವ ಕುರಿತು ವರದಿಯಾಗಿದೆ. ಕೆವೈಸಿ ಮಾಡಿಸಲು ಡಿ. 31 ಕೊನೆಯ ದಿನಾಂಕವಲ್ಲ. ಸಬ್ಸಿಡಿಗಾಗಿ ಗ್ರಾಹಕರು ನಿಗದಿತ ದಿನಾಂಕದೊಳಗೆ ಕೆವೈಸಿ ಮಾಡಿಸಿಕೊಳ್ಳಬೇಕು ಎಂಬುದು ತಪ್ಪು ಮಾಹಿತಿ.

    ಸಾರ್ವಜನಿಕರು ವಾಟ್ಸಾಪ್ ಸಂದೇಶ ಅಥವಾ ವದಂತಿಗಳನ್ನು ನಂಬಬಾರದು. ಅನಗತ್ಯವಾಗಿ ಗೊಂದಲಗಳಿಗೆ ಒಳಗಾಗಬಾರದು. ಗ್ರಾಹಕರು ಬಿಡುವಿನ ವೇಳೆಯಲ್ಲಿ ಗ್ಯಾಸ್ ಏಜೆನ್ಸಿಗಳಿಗೆ ತೆರಳಿ ಆಧಾರ್ ಬಯೋಮೆಟ್ರಿಕ್ ನೀಡಬಹುದು. ತಪ್ಪು ಮಾಹಿತಿಯಿಂದ ಗ್ಯಾಸ್ ಏಜೆನ್ಸಿಗಳ ಬಳಿ ಸರತಿ ಸಾಲಿನಲ್ಲಿ ನಿಲ್ಲುವುದು ಬೇಡ ಎಂದು ವಿನೋದಕುಮಾರ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap