ಬೆಂಗಳೂರು
ಬುದ್ಧ ಪೂರ್ಣಿಮಾ ಪ್ರಯುಕ್ತ ಮೇ 05 ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಮೇ 05 ಶುಕ್ರವಾರ ಬುದ್ದ ಪೂರ್ಣಿಮಾ ಜೊತೆಗೆ ಚಂದ್ರಗ್ರಹಣವೂ ನಡೆಯಲಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮೇ 05 ರ ಶುಕ್ರವಾರದಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ಹತ್ಯೆಯನ್ನು ನಿಷೇಧಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಪೂರ್ಣ ಮಾಂಸ ಮಾರಾಟ ನಿಷೇಧಿಸಿ ಸುತ್ತೋಲೆಯನ್ನು ಹೊರಡಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆದೇಶಕ್ಕೆ ಹಲವರು ಆಕ್ರೋಶ ಹೊರಹಾಕಿದ್ದಾರೆ. ಇಂತಹ ನಿಷೇಧಗಳು ಇಂಟರ್‌ನೆಟ್ ಆಧಾರಿತ ಮಾಂಸ ಮಾರಾಟಗಾರರಿಗೆ ಸಹಾಯ ಮಾಡಲು ಹೊರಡಿಸಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಮನವಮಿ ಹಿನ್ನೆಲೆ ಬೃಹತ್ ಬೆಂಗಳೂರು ಹಾಮನಗರ ಪಾಲಿಕೆ (ಬಿಬಿಎಂಪಿ) ಮಾರ್ಚ್ 30ರ ಗುರುವಾರದಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ಹತ್ಯೆಯನ್ನು ನಿಷೇಧಿಸಿಸಲಾಗಿತ್ತು. ಫೆಬ್ರವರಿಯಲ್ಲಿ, ಮಹಾ ಶಿವರಾತ್ರಿ ಸಂದರ್ಭದಲ್ಲಿ ಮಾಂಸ ಮಾರಾಟ ಮತ್ತು ವಧೆ ನಿಷೇಧಿಸಿ ಬಿಬಿಎಂಪಿ ಇದೇ ರೀತಿಯ ಆದೇಶವನ್ನು ಹೊರಡಿಸಿತ್ತು.