ಬೆಂಗಳೂರು:
ಪಿಎಸ್‌ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಐಡಿ ಅಧಿಕಾರಿಗಳು ಬಂಧಿಸಿರುವ ಯಾರೂ ಕೂಡ ಕಿಂಗ್ ಪಿನ್ ಗಳಲ್ಲ. ಇವರೆಲ್ಲ ಮಧ್ಯವರ್ತಿಗಳು ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಹಿಂದೆ ಖಂಡಿತ ಪ್ರಭಾವಿ ಸಚಿವರಿದ್ದಾರೆ. ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳ ಬಗ್ಗೆಯೂ ಸಂಪೂರ್ಣ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಪಿಎಸ್‌ಐ ಪರೀಕ್ಷೆ ಅಕ್ರಮ: ಬೆಂಗಳೂರಿನಲ್ಲಿ 22 ಅಭ್ಯರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲು
ಈಗ ಸಿಐಡಿ ಬಂಧಿಸಿರುವ ಯಾರೂ ಪ್ರಕರಣದ ಕಿಂಗ್ ಪಿನ್ ಗಳಲ್ಲ. ಕಲಬುರ್ಗಿ ಮಾತ್ರವಲ್ಲ, ಬೆಂಗಳೂರು, ಬೆಳಗಾವಿಯಲ್ಲಿಯೂ ಅಕ್ರಮ ನಡೆದಿದೆ. ಇಷ್ಟೆಲ್ಲ ಅಕ್ರಮ ನಡೆದರೂ ಏನೂ ನಡೆದೇ ಇಲ್ಲ ಎಂಬಂತೆ ಮುಖ್ಯಮಂತ್ರಿಗಳು, ಗೃಹ ಸಚಿವರು ಹೇಳುತ್ತಿದ್ದಾರೆ. ಮೊದಲು ಗೃಹ ಸಚಿವ ಅರಗ ಜ್ಞಾನೇಂದ್ರ ರಾಜಿನಾಮೆ ನೀಡಲಿ ಎಂದು ಒತ್ತಾಯಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ