ವಾಲ್ಮೀಕಿ ಹಗರಣ : ತಪ್ಪು ಯಾರೇ ಮಾಡಿದರೂ ಬಿಡುವುದಿಲ್ಲ : ಸಿದ್ದರಾಮಯ್ಯ

ಬೆಂಗಳೂರು:

    ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಲಿಮಿಟೆಡ್‌ನಲ್ಲಿ ನಡೆದ ಬಹುಕೋಟಿ ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು.

    ಮುಂಗಾರು ಅಧಿವೇಶನದ ಆರಂಭದಿಂದಲೂ ಕಲಾಪದಲ್ಲಿ ಕೋಲಾಹಲ ಸೃಷ್ಟಿಸಿದ್ದ ವಾಲ್ಮೀಕಿ ಅಭಿವೃದ್ಧಇ ನಿಗಮದ ಬಹುಕೋಟಿ ಹಗರಣ ಸಂಬಂಧ ಪ್ರತಿಪಕ್ಷಗಳ ಆರೋಪಗಳಿಗೆ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿದರು. ಜೊತೆಗೆ ಈ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ನೀವು ತಪ್ಪು ಮಾಡಿದರೂ ಬಿಡುವುದಿಲ್ಲ ಎಂದು ಹೇಳಿದರು.

    ಈ ವೇಳೆ ಸಿಎಂ ಉತ್ತರದಿಂದ ಮನವರಿಕೆಯಾಗದ ಪ್ರತಿಪಕ್ಷ ನಾಯಕ ಆರ್.ಅಶೋಕ ನೇತೃತ್ವದ ಬಿಜೆಪಿ, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಡೆತ್ ನೋಟ್ ಲ್ಲಿ ಸಚಿವರು ಹಾಗೂ ನಿಗಮ ಅಧ್ಯಕ್ಷ ಹೆಸರಿದ್ದರೂ ಎಫ್ಐಆರ್ ನಲ್ಲಿ ದಾಖಲಿಸದೆ ಸರ್ಕಾರ ಸಚಿವರನ್ನು ರಕ್ಷಿಸುವ ಕೆಲಸ ಮಾಡುತ್ತಿದೆ.

   ಸರ್ಕಾರ ಹಗರಣವನ್ನು ಮುಚ್ಚಿಹಾಕಲು ಯತ್ನಿಸಿದೆ ಎಂದು ಆರೋಪಿಸಿ ಭಿತ್ತಿಪತ್ರ ಹಿಡಿದು, ಲೂಟಿ ಲೂಟಿ ಕಾಂಗ್ರೆಸ್ ಲೂಟಿ ಎಂದು ಘೋಷಣೆ ಕೂಗುತ್ತಾ ಧರಣಿಗಿಳಿದರು. ಬಳಿಕ ಬಿಜೆಪಿಗರ ವಿರುದ್ಧ ಆಡಳಿತಾರೂಢ ಪಕ್ಷದ ಸದಸ್ಯರೂ ವಾಗ್ದಾಳಿ ಆರಂಭಿಸಿದರು. ಇದರಿಂದ ಸದನದಲ್ಲಿ ಭಾರೀ ಗದ್ದಲ ಹಾಗೂ ಕೋಲಾಹಲ ಸೃಷ್ಟಿಯಾಗಿದ್ದರಿಂದ ಸ್ಪೀಕರ್ ಖಾದರ್ ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap