ನವದೆಹಲಿ:
ಕೋವಿಡ್-19 ವಿರುದ್ಧ ಲಸಿಕೆ ಹಾಕಿಸಿಕೊಳ್ಳಲು ಯಾವುದೇ ವ್ಯಕ್ತಿಯನ್ನು ಒತ್ತಾಯಿಸುವಂತಿಲ್ಲ ಎಂದು ಭಾರತದ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಪಿನಲ್ಲಿ ಹೇಳಿದೆ. ಕೋವಿಡ್-19 ಲಸಿಕೆಗಳು ಮತ್ತು ಲಸಿಕೆ ನಂತರದ ಪ್ರಕರಣಗಳ ಕ್ಲಿನಿಕಲ್ ಪ್ರಯೋಗಗಳ ಡೇಟಾವನ್ನು ಬಹಿರಂಗಪಡಿಸಲು ನಿರ್ದೇಶನಗಳನ್ನು ಕೋರಿ ಜಾಕೋಬ್ ಪುಲಿಯೆಲ್ ಅವರು ಸಲ್ಲಿಸಿದ ಮನವಿಯಲ್ಲಿ ನ್ಯಾಯಾಲಯವು ಈ ತೀರ್ಪು ನೀಡಿದೆ.
ಪ್ರಸ್ತುತ ಕೋವಿಡ್-19 ಲಸಿಕೆ ನೀತಿಯು ಸ್ಪಷ್ಟವಾಗಿ ಅನಿಯಂತ್ರಿತ ಮತ್ತು ಅಸಮಂಜಸವಾಗಿದೆ ಎಂದು ಹೇಳಲಾಗುವುದಿಲ್ಲ ಎಂದು ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್ ಮತ್ತು ಬಿ ಆರ್ ಗವಾಯಿ ಅವರ ಪೀಠ ಹೇಳಿದೆ. ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ದೈಹಿಕ ಸ್ವಾಯತ್ತತೆ ಮತ್ತು ಸಮಗ್ರತೆಯನ್ನು ರಕ್ಷಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ