ಬೆಂಗಳೂರು:
ತನ್ನ ಸುರಕ್ಷಿತ ಮತ್ತು ಆಧುನಿಕತೆಗೆ ಹೆಸರುವಾಸಿಯಾಗಿರುವ ನೋಕಿಯಾ ಸಂಸ್ಥೆಯು ಭಾರತದಲ್ಲಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ನೋಕಿಯಾ G42 5G ಸ್ಮಾರ್ಟ್‌ಫೋನ್ ಫೋನ್ ಪ್ರಿಯರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಸೆಪ್ಟೆಂಬರ್ 15 ರಂದು) ಮಧ್ಯಾಹ್ನ 12 ಗಂಟೆಯಿಂದ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಮೊದಲ ಮಾರಾಟ ಪ್ರಾರಂಭಿಸಲಿದೆ.
ಅಂದಹಾಗೆ ನೋಕಿಯಾದ ಈ 5G ಫೋನ್ ಸ್ನಾಪ್‌ಡ್ರಾಗನ್ 480+ ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದೆ.
ಹೌದು, ನೋಕಿಯಾ ಸಂಸ್ಥೆಯ ನೋಕಿಯಾ G42 5G ಮೊಬೈಲ್ ಇಂದು ಫಸ್ಟ್ ಸೇಲ್ ಶುರು ಮಾಡಲಿದೆ. ಇನ್ನು ಈ ಫೋನ್ ಅಧಿಕೃತವಾಗಿ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಖರೀದಿಗೆ ಲಭ್ಯವಾಗಲಿದ್ದು, ಗ್ರಾಹಕರು ಈ ಫೋನ್ ಅನ್ನು ಗ್ರೇ ಮತ್ತು ಪರ್ಪಲ್ ಬಣ್ಣಗಳಲ್ಲಿ ಖರೀದಿ ಮಾಡಬಹುದಾಗಿದೆ. ಅಂದಹಾಗೆ ಈ ಫೋನಿನ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸಲ್ ಸೆನ್ಸಾರ್ ನಲ್ಲಿದೆ.
ಇನ್ನು ಫೋನ್ ನಲ್ಲಿ ನಿಮಗೆ 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದ್ದು, ವರ್ಚುವಲ್ RAM ಸೌಲಭ್ಯ ಕೂಡಾ ಪಡೆದುಕೊಂಡಿದೆ. ಹಾಗೆಯೇ ಇದು 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು? ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ನೋಕಿಯಾ G42 5G ಡಿಸ್‌ಪ್ಲೇ ಮಾಹಿತಿ :
ನೋಕಿಯಾ G42 5G ಮೊಬೈಲ್ 6.56 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಪಡೆದುಕೊಂಡಿದ್ದು, ಇದು 720 x 1612 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯ ಒಳಗೊಂಡಿದೆ. ಅಲ್ಲದೇ ಈ ಫೋನ್ 90Hz ರಿಫ್ರೆಶ್ ರೇಟ್ ಆಯ್ಕೆ ಹೊಂದಿದ್ದು, 450 ನಿಟ್ಸ್ ಕನಿಷ್ಠ ಹಾಗೂ 560 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಸಾಮರ್ಥ್ಯ ಪಡೆದಿದೆ. ಜೊತೆಗೆ ಸ್ಕ್ರೀನ್ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ 3 ಸೌಲಭ್ಯ ಸಹ ಇದೆ.
ನೋಕಿಯಾ G42 5G ಪ್ರೊಸೆಸರ್ ಯಾವುದು :
ನೋಕಿಯಾ G42 5G ಮೊಬೈಲ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 480+ ಪ್ರೊಸೆಸರ್ ನಲ್ಲಿ ಕೆಲಸ ಮಾಡಲಿದ್ದು, ಅಡ್ರಿನೋ 619 GPU ಸಪೋರ್ಟ್ ಕೂಡಾ ಪಡೆದುಕೊಂಡಿದೆ. ಹಾಗೆಯೇ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಪಡೆದಿರುವ ಈ ಫೋನ್ 6GB RAM + 128GB ಆಂತರೀಕ ಸ್ಟೋರೇಜ್ ಆಯ್ಕೆ ಪಡೆದಿದ್ದು, ಹೆಚ್ಚಿನ ಸಂಗ್ರಹಕ್ಕಾಗಿ ಎಸ್‌ಡಿ ಕಾರ್ಡ್ ಆಯ್ಕೆ ಲಭ್ಯ ಇದೆ.
ನೋಕಿಯಾ G42 5G ಕ್ಯಾಮೆರಾ ರಚನೆ :
ನೋಕಿಯಾ G42 5G ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 2 ಮೆಗಾ ಪಿಕ್ಸೆಲ್ ಸೆನ್ಸರ್ ಸಾಮರ್ಥ್ಯ ಪಡೆದಿವೆ. ಇದರೊಂದಿಗೆ ಮುಂಭಾಗದಲ್ಲಿ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಜೊತೆಗೆ ಎಲ್‌ಇಡಿ ಫ್ಲ್ಯಾಶ್, ನೈಟ್ ಮೋಡ್ 2.0, AI ಪೋರ್ಟ್ರೇಟ್ ಮತ್ತು OZO 3D ಆಡಿಯೊ ಕ್ಯಾಪ್ಚರ್ ಸೌಲಭ್ಯ ಇವೆ.
ನೋಕಿಯಾ G42 5G ಬ್ಯಾಟರಿ ಹಾಗೂ ಇತರೆ:
ನೋಕಿಯಾ G42 5G ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, 20W ಚಾರ್ಜರ್ ಪಡೆದಿದೆ. ಒಂದು ಪೂರ್ಣ ಚಾರ್ಜಿಂಗ್‌ನಲ್ಲಿ ಮೂರು ದಿನಗಳ ಬ್ಯಾಟರಿ ಬ್ಯಾಕ್‌ಅಪ್ ಒದಗಿಸಲಿದೆ. ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 3.5 ಎಂಎಂ ಆಡಿಯೊ ಜಾಕ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, IP52 ರೇಟಿಂಗ್ ಇದ್ದು, 5G SA / NSA, ಡ್ಯುಯಲ್ 4G VoLTE, ವೈ-ಫೈ 802.11 ac (2.4GHz + 5GHz), ಬ್ಲೂಟೂತ್ ಆವೃತ್ತಿ 5.1 ಆಯ್ಕೆಗಳಿವೆ.
ನೋಕಿಯಾ G42 5G ಬೆಲೆ ಎಷ್ಟು ಹಾಗೂ ಲಭ್ಯತೆ ಮಾಹಿತಿ :
ನೋಕಿಯಾ G42 5G ಫೋನ್ 6GB + 128GB ಸಾಮರ್ಥ್ಯದ ಸಿಂಗಲ್ ವೇರಿಯಂಟ್ ಆಯ್ಕೆ ಪಡೆದಿದ್ದು, ಇದರ ಬೆಲೆಯು 12,599ರೂ. ಆಗಿದೆ. ಇನ್ನು ಈ ಫೋನ್ ಗ್ರೇ ಮತ್ತು ಪರ್ಪಲ್ ಬಣ್ಣಗಳ ಆಯ್ಕೆ ಪಡೆದಿದ್ದು, ಗ್ರಾಹಕರು ಅಮೆಜಾನ್ ಪ್ಲಾಟ್‌ಫಾರ್ಮ್ ಮೂಲಕ ಖರೀದಿ ಮಾಡಬಹುದು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ