ಬೆಂಗಳೂರು;
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಇಂದು ಅಧಿಸೂಚನೆ ಹೊರಬೀಳಲಿದ್ದು, ಇಂದಿನಿಂದಲೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ. ರಾಜ್ಯದೆಲ್ಲೆಡೆ ಈಗಾಗಲೇ ಚುನಾವಣಾ ಪ್ರಕ್ರಿಯೆ ಬಿರುಸುಗೊಂಡಿದ್ದು, ಬಿಜೆಪಿ ಪ್ರಮುಖ 189 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
ಇನ್ನೊಂದೆಡೆ ಕಾಂಗ್ರೆಸ್ 166 ಉಮೇದುವಾರರನ್ನು ಆಯ್ಕೆ ಮಾಡಿದ್ದು, ಜೆಡಿಎಸ್ ಕೂಡ 93 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಮೂರು ಪಕ್ಷಗಳು ಕಾದು ನೋಡುವ ತಂತ್ರವನ್ನು ಅನುಸರಿಸುತ್ತಿವೆ. ಈ ನಡುವೆ ಇಂದಿನಿಂದಂಲೇ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ನಾಮಪತ್ರ ಸಲ್ಲಿಸಲು ಇದೇ ತಿಂಗಳ 20 ಕೊನೆಯ ದಿನವಾಗಿದೆ. ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, 24 ರಂದು ನಾಮಪತ್ರ ವಾಪಸ್ಸು ಪಡೆಯಲು ಕಡೆಯ ದಿನವಾಗಿದೆ. ಮೇ 10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13 ಮತ ಎಣಿಕೆ ನಡೆಯಲಿದೆ. ಮತದಾನ ನ್ಯಾಯ ಹಾಗೂ ಮುಕ್ತವಾಗಿ ನಡೆಯಲು ಚುನಾವಣಾ ಆಯೋಗ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ