ಅನಿವಾಸಿ ಕನ್ನಡಿಗರು ಕರ್ನಾಟಕದ ಪ್ರವಾಸೋದ್ಯಮವನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಿ: ಡಾ.ಕೆ. ಸುಧಾಕರ್

ಬೆಂಗಳೂರು:

    ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶವಿದ್ದು, ಅನಿವಾಸಿ‌ ಕನ್ನಡಿಗರು ಜಾಗತಿಕ ಮಟ್ಟದಲ್ಲಿ ಇದನ್ನು ಪರಿಚಯಿಸಬೇಕು‌ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಕರೆ ನೀಡಿದರು.ವರ್ಚುವಲ್ ಕಾರ್ಯಕ್ರಮದಲ್ಲಿ ಭಾನುವಾರ ರಾತ್ರಿ ಅಕ್ಕಾ ಸಮಾವೇಶದ ಸಮಾರೋಪ‌ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

     ಕರ್ನಾಟಕದಲ್ಲಿ ವೈವಿದ್ಯಮಯ ನೈಸರ್ಗಿಕ ಸಂಪನ್ಮೂಲ ಹೇರಳವಾಗಿದೆ. ಅಲ್ಲದೆ ನಮ್ಮ ರಾಜ್ಯ ಪ್ರವಾಸೋದ್ಯಮಕ್ಕೆ ಸೂಕ್ತವಾದ ಸ್ಥಳವಾಗಿದೆ. ಕರ್ನಾಟಕದಿಂದ ಅಮೆರಿಕಾಗೆ ತೆರಳುವ ಕನ್ನಡಿಗರು ಇಲ್ಲಿರುವ ಸಂಪನ್ಮೂಲಗಳ ಬಗ್ಗೆ ಅಲ್ಲಿನ ಜನರಿಗೆ ಪ್ರಚೂರ ಪಡೆಸಿ, ರಾಜ್ಯದ ಪ್ರವಾಸೋದ್ಯನ್ನು ವಿಶ್ವ ಮಟ್ಟಕ್ಕೆ ತೆಗೆದುಕೊಂಡು ಹೋಗಬೇಕು ಎಂದು ಮನವಿ ಮಾಡಿದರು.

      ವಿಶ್ವದಲ್ಲೇ ಅಮೆರಿಕಾ ಕೊರೋನದಿಂದ ಹೆಚ್ಚು ಸಂಕಷ್ಟಕ್ಕೆ ಒಳಗಾದ ದೇಶವಾಗಿದೆ. ಕರ್ನಾಟಕದಲ್ಲಿ ಕೊರೋನ ನಿಯಂತ್ರಣವನ್ನು ಕಟ್ಟುನಿಟ್ಟಿನಿಂದ ಮಾಡಿದ್ದೇವೆ. ವಿಶ್ವದಲ್ಲೇ ಕರ್ನಾಟಕ‌ದ ಸಾವಿನ‌ ಪ್ರಮಾಣ ಶೇ.1.6 ಇದೆ. ಕೊರೋನ ಸಂಕಷ್ಟದಲ್ಲೂ ಆರ್ಥಿಕತೆಯನ್ನು ಸಬಲವಾಗಿ ತೆಗೆದುಕೊಂಡು ಹೋಗುತ್ತಿದ್ದೇವೆ. ಚೀನಾ ದೇಶಕ್ಕೆ‌ ಸೆಡ್ಡು ಹೊಡೆಯಲು ಕರ್ನಾಟಕದಲ್ಲಿ ಆಟಿಕೆಗಳ ಉತ್ಪಾದನಾ ಘಟಕ ತೆರೆಯುತ್ತುದ್ದು, ಇದಕ್ಕೆ ಮೋದಿ ಅವರು ಚಾಲನೆ ಕೊಟ್ಟಿದ್ದಾರೆ. ಚನ್ನಪಟ್ಟಣ ಹಾಗೂ ಈ ಆಟಿಕೆ ಘಟಕಗಳ ಮೂಲಕ ನಮ್ಮ‌ ಆಟಿಕೆ ಉತ್ಪಾದನೆಯಲ್ಲಿ ನಮ್ಮ ದೇಶ ಸ್ವಾವಲಂಬನೆ ಹೊಂದಲಿದೆ ಎಂದರು.

      ಕನ್ನಡ ಭಾಷೆಗೆ 5 ಸಾವಿರ ವರ್ಷಗಳ ಇತಿಹಾಸವಿದೆ. ಇಲ್ಲಿನ ಸಾಂಸ್ಕೃತಿ ವೈಭವ ಅತ್ಯನ್ನತವಾದದ್ದು. ಕನ್ನಡಿಗರು‌ ಸಹೃದಯಿಗಳು.
ನಮ್ಮಲ್ಲಿನ‌ ಯುವಕರು ಹೆಚ್ಚಿನ ವಿದ್ಯಾಭ್ಯಾಸಕ್ಕೆ ಅಮೆರಿಕಾಗೆ ತೆರಳಿ ಅಲ್ಲಿನ ಜನರಿಗೆ ಸ್ವಂತ ಶಕ್ತಿಯಿಂದ ವಿವಿಧ ವೃತ್ತಿಯಲ್ಲಿ ತೊಡಗಿ ಕನ್ನಡ ನಾಡಿಗೆ ಕೀರ್ತಿ ತರುತ್ತಿದ್ದಾರೆ.‌ ಕರ್ನಾಟಕಕ್ಕೆ ಮರಳಿ ಕೆಲವರು ಶಿಕ್ಷಣ, ಆರೋಗ್ಯ, ಸಾಂಸ್ಕೃತಿಕ ಕ್ಷೇತ್ರವನ್ನು ಬೆಳೆಸುವ ಕೆಲಸ ಮಾಡುತ್ತಿದ್ದಾರೆ. ಕನ್ನಡದ ಮೇಲಿನ ನಿಮ್ಮ ಅಭಿಮಾನಕ್ಕೆ ಧನ್ಯವಾದಗಳನ್ನು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap