ಚಿಕ್ಕಮಗಳೂರು : ಹೋಂಸ್ಟೇ, ರೆಸಾರ್ಟ್​​ಗಳಿಗೆ ಅರಣ್ಯ ಇಲಾಖೆ ನೋಟಿಸ್​

ಚಿಕ್ಕಮಗಳೂರು

   ಅಂಕೋಲಾದ ಶಿರೂರು, ಶಿರಾಡಿ ಘಾಟ ಭೂಕುಸಿತ   ಹಾಗೂ ವಯನಾಡಿನ ದುರ್ಘಟನೆ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ   ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರ್ಮಿಸಲಾಗಿರುವ ರೆಸಾರ್ಟ್​​ ಅಥವಾ ಹೋಂಸ್ಟೇಗಳಿಗೆ ನೋಟಿಸ್ ನೀಡಿದೆ. ಅನಧಿಕೃತವಾಗಿ ನಡೆಯುತ್ತಿರುವ ಹೋಂಸ್ಟೇ ಅಥವಾ ರೆಸಾರ್ಟ್​ಗಳನ್ನು ಪತ್ತೆ ಹಚ್ಚಲು ಮುಂದಾಗಿದೆ.

  ಚಿಕ್ಕಮಗಳೂರು ಅರಣ್ಯ ವಲಯ  ವ್ಯಾಪ್ತಿಯಲ್ಲಿನ ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾ ಬುಡನ್​ಸ್ವಾಮಿ ದರ್ಗಾ, ಚಂದ್ರದ್ರೋಣ ಪರ್ವತದ ಸುತ್ತಮುತ್ತ ನಿರ್ಮಾಣವಾಗಿರುವ ಹೋಂಸ್ಟೇ, ರೆಸಾರ್ಟ್​ ಮಾಲಿಕರು ತಮ್ಮ ಹೋಂಸ್ಟೇಗೆ ಸಂಬಂಧಿಸಿದ ಕಂದಾಯ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸುವಂತೆ ಡಿಎಫ್​ಒ ರಮೇಶ್ ಬಾಬು ಅವರು ನೋಟಿಸ್ ಹೊರಡಿಸಿದ್ದಾರೆ.

   ಸಾಲು ಸಾಲು ದುರ್ಘಟನೆ ಬಳಿಕ ಎಚ್ಚತ್ತ ಅರಣ್ಯ ಇಲಾಖೆ ಚಿಕ್ಕಮಗಳೂರು ಅರಣ್ಯ ವಲಯದಲ್ಲಿ ನಿರ್ಮಿಸಲಾಗಿರುವ ಅನಧಿಕೃತ ಹೋಂಸ್ಟೇ ಅಥವಾ ರೆಸಾರ್ಟ್​​​ಗಳ ಸ್ಥಳ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿತ್ತು. ವರದಿ ಸಲ್ಲಿಕೆಯಾದ ಬಳಿಕ ಅರಣ್ಯ ಇಲಾಖೆ 2015ರ ನಂತರ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ರೆಸಾರ್ಟ್ ​​ಅಥವಾ ಹೋಂಸ್ಟೇ, ತೋಟ, ಬಡವಾಣೆಗಳನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡುವಂತೆ ಸೂಚನೆ ನೀಡಿತ್ತು.

   ಇದೀಗ, ಅನಧೀಕೃತವಾಗಿ ನಡೆಯುತ್ತಿರುವ ರೆಸಾರ್ಟ್​ ಅಥವಾ ಹೋಂಸ್ಟೇಗಳನ್ನು ಪತ್ತೆಹಚ್ಚಲು ಅರಣ್ಯ ಇಲಾಖೆ ಮುಂದಾಗಿದೆ. ಹೀಗಾಗಿ ಚಿಕ್ಕಮಗಳೂರು ಅರಣ್ಯ ವಲಯದಲ್ಲಿ ನಿರ್ಮಾಣ ಮಾಡಿರುವ ಎಲ್ಲ ಹೋಂಸ್ಟೇ ಮಾಲಿಕರು ಕಂದಾಯ ದಾಖಲಾತಿಗಳನ್ನು ಸಲ್ಲಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ.

Recent Articles

spot_img

Related Stories

Share via
Copy link
Powered by Social Snap