ಬೆಂಗಳೂರು :
ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ. ರೈತರಿಗೆ ನೋಟಿಸ್ ನೀಡಲಾಗಿದ್ದರೆ, ಅದನ್ನು ವಾಪಸ್ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿ ನಿನ್ನೆ ಕಂದಾಯ ಸಚಿವ ಕೃಷ್ಣ ಭೈರೇಗೌಡ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಸಭೆ ನಡೆಸಿ, ರೈತರ ಜಮೀನು ವಕ್ಫ್ ಬೋರ್ಡ್ಗೆ ಹೋಗಲ್ಲ ಎಂದು ಹೇಳಿದ್ದಾರೆ ಮತ್ತು ಯಾವುದಾದರೂ ರೈತನಿಗೆ ನೋಟೀಸ್ ಬಂದಿದ್ದರೆ ಅದನ್ನು ವಾಪಸ್ಸು ಪಡೆಯಲಾಗುವುದು ಎಂದರು.