ನವದೆಹಲಿ:
ಅಹಿಂಸಾ ತತ್ವದ ಜನಕ “ಅಹಿಂಸಾ ಪರಮೋ ಧರ್ಮಹಃ” ಎಂಬ ಶ್ಲೋಕಕ್ಕೆ ತನ್ನ ಜೀವನವನ್ನೇ ಮುಡಿಪಾಗಿಟ್ಟ ರಾಷ್ಟ್ರಪಿತ ಶ್ರೀ ಮಹಾತ್ಮಾ ಗಾಂಧೀಜಿಯವರ 150ನೇ ವರ್ಷಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಅದರ ಅಂಗವಾಗಿ ರಾಷ್ಟ್ರಪತಿ ಶ್ರೀ ರಾಮನಾಥ್ ಕೋವಿಂದ್ ಹಾಗೂ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ರಾಜಧಾನಿ ದೆಹಲಿಯ ರಾಜ್’ಘಾಟ್’ಗೆ ಭೇಟಿ ನೀಡಿ ಬಾಪೂಜಿಯವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.
ಇಂದು ಬೆಳಿಗ್ಗೆ ರಾಜ್’ಘಾಟ್’ಗೆ ಭೇಟಿ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹಾಗೂ ಬಿಜೆಪಿ ಹಿರಿಯ ನಾಯಕರೂ ಕೂಡ ಪುಷ್ಪನಮನ ಸಲ್ಲಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ