ದೆಹಲಿಯಲ್ಲಿ ಕನಕ ಜಯಂತಿ…!!!!

ನವದೆಹಲಿ

         ದಾಸ ಶ್ರೇಷ್ಠ ಸಂತ ಕನಕದಾಸರ ರಾಷ್ಟ್ರೀಯ ಜಯಂತೋತ್ಸವ ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಭಾನುವಾರ ಅದ್ದೂರಿಯಾಗಿ ಜರುಗಿತು.

         ದೆಹಲಿಯ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಸಂಘ ದೆಹಲಿ ಕನ್ನಡ ಸಂಘದಲ್ಲಿ ಆಯೋಜಿಸಿದ ಸಮಾರಂಭವನ್ನು ಉದ್ಘಾಟಿಸಿದ ಮಾಜಿ ಸಚಿವರಾದ ಹೆಚ್.ಎಂ. ರೇವಣ್ಣ ಅವರು ಮಾತನಾಡಿ ಕನಕದಾಸರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಅವರು ತೋರಿದ ಹಾದಿಯಲ್ಲಿ ನಾವೆಲ್ಲರೂ ನಡೆಯೋಣ ಎಂದರು.

         ರಾಜ್ಯದ ರಾಜಧಾನಿ ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಕನಕದಾಸರ ಪ್ರತಿಮೆಯನ್ನು ಕಳೆದ ವರ್ಷ ಉದ್ಘಾಟಿಸಲಾಗಿದ್ದು ರಾಜ್ಯದ ಎಲ್ಲರ ಗಮನ ಸೆಳೆದಿದೆ. ಕನಕದಾಸರ ಕೃತಿಗಳನ್ನು ಸಂರಕ್ಷಿಸುವ ಕಾರ್ಯವಾಗುತ್ತಿದೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಅರಣ್ಯ ಸಚಿವ ಆರ್. ಶಂಕರ್ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರನ್ನು ಸನ್ಮಾನಿಸಲಾಯಿತು.

        ದೆಹಲಿಯಲ್ಲಿ ಕನಕ ರಾಷ್ಟೀಯ ಜಯಂತಿ ಆಚರಿಸುತ್ತಿರುವುದು ಕನಕದಾಸರ ತತ್ವಗಳು ಇಡೀ ವಿಶ್ವಕ್ಕೆ ವ್ಯಾಪಿಸಿದೆ ಎಂಬುದಕ್ಕೆ ನಿದರ್ಶನ. ಪ್ರತಿ ವರ್ಷ ರಾಷ್ಟ್ರ ಮಟ್ಟದಲ್ಲಿ ಕನಕ ಜಯಂತಿಯನ್ನು ಆಚರಿಸಲಾಗುವುದು. ಎಲ್ಲಾ ರಾಜ್ಯಗಳಿಂದ ಕನಕದಾಸರ ಅನುಯಾಯಿಗಳು ಆಗಮಿಸಿ ಈ ಸಮಾರಂಭವನ್ನು ಸಾಕ್ಷೀಕರಿಸಲಿದ್ದಾರೆ ಎಂದರು.

       ದೆಹಲಿಯ ಇಂಡಿಯಾ ಗೇಟ್‍ನಿಂದ ಸುಮಾರು 2 ಸಾವಿರಕ್ಕೂ ಹೆಚ್ಚು ಕನಕದಾಸರ ಅನುಯಾಯಿಗಳು ಡೊಳ್ಳು, ವೀರಗಾಸೆ, ಪಟಕುಣಿತದೊಂದಿಗೆ ಬೃಹತ್ ಸಾಂಸ್ಕøತಿಕ ಮೆರವಣಿಗೆ ನಡೆಸಿದರು. ಕನಕ ಜಯಂತಿ ಸಮಾರಂಭದಲ್ಲಿ ಸಚಿವರಾದ ಬಂಡೆಪ್ಪ ಖಾಶೆಂಪೂರ, ಜೆ.ಡಿ.ಎಸ್. ರಾಜ್ಯಾಧ್ಯಕ್ಷರಾದ ಹೆಚ್. ವಿಶ್ವನಾಥ, ಸಿ.ಎಸ್. ಶಿವಳ್ಳಿ, ಸೂರಜ್ ಹೆಗಡೆ, ಕಾಂತರಾಜ್ ಸೇರಿದಂತೆ ವಿವಿಧ ರಾಜ್ಯಗಳ ಕುರುಬ ಸಮದಾಯದ ಮುಖಂಡರು ಭಾಗವಹಿಸಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap