ಬೆಂಗಳೂರು:
ಕಾಂಗ್ರೆಸ್ 24 ಮಂದಿ ಶಾಸಕರು ಇಂದು ಶನಿವಾರ ಬೆಳಗ್ಗೆ 11.45ಕ್ಕೆ ಬೆಂಗಳೂರಿನ ರಾಜಭವನದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಸಂದರ್ಭದಲ್ಲಿ ರಾಜಭವನದ ಸುತ್ತಮುತ್ತ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.
ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಕೆ.ಆರ್.ವೃತ್ತದಿಂದ ಗೋಪಾಲಗೌಡ ವೃತ್ತದವರೆಗೆ ಸಂಚಾರ ಬಂದ್ ಆಗಲಿದೆ. ನೃಪತುಂಗ ರಸ್ತೆ ಅಥವಾ ಕಬ್ಬನ್ಪಾರ್ಕ್ ಒಳಭಾಗದ ರಸ್ತೆಯಲ್ಲಿ ಸಂಚಾರಕ್ಕೆ ಅನುಮತಿಸಲಾಗಿದೆ. ಬಾಳೇಕುಂದ್ರಿ ವೃತ್ತದಿಂದ ಬರುವ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ.
ಕಾಫಿ ಬೋರ್ಡ್ ಅಥವಾ ತಿಮ್ಮಯ್ಯ ವೃತ್ತದ ಕಡೆ ಸಂಚಾರ ನಿರ್ಬಂಧ ಹೇರಲಾಗಿದೆ. ಪೊಲೀಸ್ ತಿಮ್ಮಯ್ಯ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಸಂಚಾರ ಸಂಪೂರ್ಣ ಬಂದ್ ಆಗಲಿದೆ. ಶಿವಾಜಿನಗರ ಬಸ್ ನಿಲ್ದಾಣದಿಂದ ಬರುವ ವಾಹನಗಳ ಹಾಗೂ ಕ್ವೀನ್ಸ್ ಸರ್ಕಲ್, ಸಿದ್ದಲಿಂಗಯ್ಯ ವೃತ್ತದ ಕಡೆಗೆ ಬರುವ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ.
ಪಾಸ್ ಇರುವ ವಾಹನಗಳು ರಾಜಭವನದ ಗೇಟ್ ಬಳಿಗೆ ಬರಬಹುದು, ರಾಜಭವನದ ಗೇಟ್ ಬಳಿ ಗಣ್ಯರನ್ನು ಇಳಿಸಿ ಮುಂದೆ ಸಾಗಬೇಕು. ಎಲ್ಹೆಚ್ ಗೇಟ್ ಮೂಲಕ ತೆರಳಿ ಪಾರ್ಕಿಂಗ್ ಲಾಟ್ನಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಬರುವ ವಿಶೇಷ ಆಹ್ವಾನಿತರಿಗೆ ವಿಧಾನಸೌಧದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ‘ನೆಹರು ತಾರಾಲಯ, ಎಂ.ಎಸ್.ಬಿಲ್ಡಿಂಗ್ ಒಳಭಾಗದಲ್ಲಿ ಪಾರ್ಕಿಂಗ್, ವಿಧಾನಸೌಧದ ಪಶ್ಚಿಮ ದ್ವಾರ ಮತ್ತು ಉತ್ತರ ದ್ವಾರದ ಮುಂದಿನ ರಸ್ತೆ ವಿಕಾಸ ಸೌಧದ ಸೆಲ್ಲಾರ್ನಲ್ಲಿ ಗಣ್ಯರ ವಾಹನಗಳ ಪಾರ್ಕಿಂಗ್ಗೆ ವ್ಯವಸ್ಥೆ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
