ಬೆಳಗಾವಿ:
ಅಂಗನವಾಡಿ ಸಹಾಯಕಿಯಿಂದ ಅಧಿಕಾರಿಗಳು 15 ಸಾವಿರ ಲಂಚದ ಹಣ ಸ್ವೀಕರಿಸುವಾಗ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸೂಪರಿಂಟೆಂಡೆಂಟ್ ಅಬ್ದುಲ್ ವಲಿ ಹಾಗೂ ಕಂಪ್ಯೂಟರ್ ಆಪರೇಟರ್ ಸೌಮ್ಯಾ ಬಡಿಗೇರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಅಧಿಕಾರಿಗಳು.
ಇಬ್ಬರು ಸೇರಿ, ಹುಕ್ಕೇರಿ ಮೂಲದ ಅಂಗನವಾಡಿ ಸಹಾಯಕಿ ಶಕುಂತಲಾ ಕಾಂಬ್ಳೆಯವರ ವರ್ಗಾವಣೆಗೆ 30 ಸಾವಿರ ರೂ. ಹಣದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅಂಗನವಾಡಿ ಸಹಾಯಕಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.ಅಂಗನವಾಡಿ ಸಹಾಯಕಿಯಿಂದ ಅಧಿಕಾರಿಗಳು 15 ಸಾವಿರ ರೂ. ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಹಣ ಪಡೆದಿದ್ದ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
