ಗ್ರಾಮ ಲೆಕ್ಕಿಗರ ಪದನಾಮ ಬದಲಾವಣೆಗೆ ಅಸ್ತು ಎಂದ ಸರ್ಕಾರ

ಬೆಂಗಳೂರು

     ಕರ್ನಾಟಕ ಸರ್ಕಾರ ಕಂದಾಯ ಇಲಾಖೆಯಲ್ಲಿನ ಗ್ರಾಮಲೆಕ್ಕಿಗ ಹುದ್ದೆಯನ್ನು ಗ್ರಾಮ ಆಡಳಿತ ಅಧಿಕಾರಿ   ಎಂದು ಪುನರ್ ಪದನಾಮೀಕರಿಸುವ ಕುರಿತು ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತು ಕರ್ನಾಟಕ ರಾಜ್ಯಪತ್ರದಲ್ಲಿಯೂ ಆದೇಶಿಸಲಾಗಿದೆ. ಹುದ್ದೆಯ ಪದನಾಮ ಮಾತ್ರ ಬದಲಾವಣೆಯಾಗಿದೆ. ನೇಮಕಾತಿ ವಿಧಾನ ಮತ್ತು ವೇತನ ಶ್ರೇಣಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ರಾಜ್ಯಪತ್ರದಲ್ಲಿ ಸ್ಪಷ್ಟಪಡಿಸಲಾಗಿದೆ.

ಕಂದಾಯ ಸಚಿವರ ಟಿಪ್ಪಣಿ, ಪ್ರಾದೇಶಿಕ ಆಯುಕ್ತರು ಬೆಂಗಳೂರು, ಮೈಸೂರು, ಬೆಳಗಾವಿ ಮತ್ತು ಕಲಬುರಗಿ ವಿಭಾಗ ಇವರ 14/10/2022ರ ಪತ್ರ ಸಂಖ್ಯೆಯ ಅನ್ವಯ ಗ್ರಾಮಲೆಕ್ಕಿಗ ಹುದ್ದೆಯನ್ನು ಗ್ರಾಮ ಆಡಳಿತ ಅಧಿಕಾರಿ ಎಂದು ಬದಲಾವಣೆ ಮಾಡಲಾಗಿದೆ. ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕಂದಾಯ ಇಲಾಖೆ (ಸೇವೆಗಳು- 2) ಹರೀಶ್ ಈ ಕುರಿತು ಆದೇಶ ಹೊರಡಿಸಿದ್ದಾರೆ.

ಈ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಸರ್ಕಾರ ಈ ಕುರಿತು ಅಧಿಕೃತ ಆದೇಶವನ್ನು ಹೊರಡಿಸಿದೆ. ಅದನ್ನು ರಾಜ್ಯಪತ್ರದಲ್ಲಿ ಸಹ ಪ್ರಕಟಿಸಲಾಗಿದೆ. ದಿನಾಂಕ 6/12/2022ರ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯಲ್ಲಿನ ಗ್ರಾಮಲೆಕ್ಕಿಗರ ಹುದ್ದೆಯ ವೇತನ ಶ್ರೇಣಿ, ನೇಮಕಾತಿ ವಿಧಾನ ಅಥವಾ ಕರ್ತವ್ಯ ಮತ್ತು ಜವಾಬ್ದಾರಿಗಳಲ್ಲಿ ಯಾವುದೇ ಬದಲಾವಣೆ ಇಲ್ಲದೇ ಗ್ರಾಮಲೆಕ್ಕಿಗರು   ಎಂಬ ಪದನಾಮವನ್ನು ಗ್ರಾಮ ಆಡಳಿತ ಅಧಿಕಾರಿ   ಎಂದು ಮರು ಪದನಾಮೀಕರಿಸಿ ಆದೇಶ ಹೊರಡಿಸಲಾಗಿದೆ.

ಗ್ರಾಮಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಬಗ್ಗೆ ಸಲಹೆ ನೀಡಲು ಸಲಹಾ ಸಮಿತಿ ರಚಿಸಲು ಸರ್ಕಾರ ಆದೇಶ ಹೊರಡಿಸಿದೆ. ಈ ಸಮಿತಿಯ ವರದಿ ಆಧರಿಸಿ ನೇಮಕಾತಿ ನಿಯಮದಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇದೆ. ಸದ್ಯ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿದವರನ್ನು ಗ್ರಾಮ ಲೆಕ್ಕಿಗರಾಗಿ ನೇಮಕಾತಿ ಮಾಡಲಾಗುತ್ತಿದೆ. ಹೆಚ್ಚಿನ ವಿದ್ಯಾರ್ಹತೆಯನ್ನು ನಿಗದಿ ಮಾಡಿಲ್ಲ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap