ಬೆಂಗಳೂರು:
ಬಡ್ತಿ ಮೀಸಲಾತಿ ಕುರಿತು ಹಿಂದಿನ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಮಸೂದೆ ಜಾರಿಯಾಗದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರ ಸಮ್ಮುಖದಲ್ಲಿ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.
ಹಿಂದಿನ ಸರ್ಕಾರ ರೂಪಿಸಿದ್ದ ಮಸೂದೆಗೆ ರಾಷ್ಟ್ರಪತಿ ಅವರ ಅಂಕಿತ ದೊರೆತಿದೆ. ಆದರೆ ಈಗಿನ ಸರ್ಕಾರ ಸುಪ್ರೀಂ ಕೋರ್ಟ್ ಆದೇಶವನ್ನು ನಿರೀಕ್ಷೆ ಮಾಡುತ್ತಿದೆ. ಹೀಗಾದರೆ ದಲಿತ ಸಮಯದಾಯಕ್ಕೆ ನ್ಯಾಯ ದೊರಕಿಸಿಕೊಡಲು ಸಾಧ್ಯವಿಲ್ಲ ಎಂದು ನೇರವಾಗಿಯೇ ಆರೋಪಿಸಿದ್ದಾರೆ ಎನ್ನಲಾಗಿದೆ.
ಶೋಷಿತ ಜನರಿಗೆ ನ್ಯಾಯ ಕೊಡಿಸಲು ಸಾಧ್ಯವಾಗದಿದ್ದರೆ ಯಾಕೆ ಅಧಿಕಾರದಲ್ಲಿರಬೇಕು. ರಾಜೀನಾಮೆ ಕೊಡುತ್ತೇನೆ ಎಂದಿದ್ದಾರೆ.
ಈ ಪ್ರಕರಣ ಸುಪ್ರೀಂಕೋರ್ಟ್‍ನಲ್ಲಿ ಬಗೆಹರಿಯುವರೆಗೂ ಏನೂ ಮಾಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಹೇಳುತ್ತಿದ್ದಾರೆ. ಹಿಂದಿನ ಸರ್ಕಾರದ ಕಾನೂನು ಜಾರಿಗೊಳಿಸಲು ಮುಖ್ಯಮಂತ್ರಿಗಳು ಅನಗತ್ಯ ಹಿಂದೇಟು ಹಾಕುತ್ತಿದ್ದಾರೆ ಎಂದು ಅಸಮಾಧಾನ ಸೂಚಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ