ಒಲಿಂಪಿಕ್-2020 : ಭಾರತಕ್ಕೆ ಮೊದಲ ಪದಕದ ಪುಳಕ!!

ಟೋಕಿಯೊ : 

       ಭಾರತದ ಮೀರಾಬಾಯಿ ಚಾನು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಪದಕ ಬೇಟೆ ಆರಂಭವಾಗಿದೆ.

      ಟೋಕಿಯೊ ಒಲಿಂಪಿಕ್ಸ್ -2020ರಲ್ಲಿ 49 ಕೆ ಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ನಾಲ್ಕು ಸುತ್ತಿನ ಪ್ರಯತ್ನಗಳಲ್ಲಿ ಚಾನು ಒಟ್ಟು 202 ಕೆಜಿ (ಸ್ನ್ಯಾಚ್‌ನಲ್ಲಿ 87 ಕೆಜಿ ಮತ್ತು ಕ್ಲೀನ್ ಮತ್ತು ಜರ್ಕ್‌ನಲ್ಲಿ 115 ಕೆಜಿ) ಎತ್ತುವ ಮೂಲಕ ಬೆಳ್ಳಿ ಪದಕ ಗೆದ್ದಿದ್ದಾರೆ.

      ಚೀನಾದ ಝಿಹೈ ಹು ಒಟ್ಟು 210 ಕೆಜಿ ತೂಕ ಎತ್ತಿ ಚಿನ್ನದ ಪದಕ ಗಳಿಸಿ ಹೊಸ ಒಲಿಂಪಿಕ್ ದಾಖಲೆಯನ್ನು ಸೃಷ್ಟಿಸಿದರೆ, ಇಂಡೋನೇಷ್ಯಾದ ವಿಂಡಿ ಕ್ಯಾಂಟಿಕಾ ಐಸಾ ಒಟ್ಟು 194 ಕೆಜಿ ತೂಕದೊಂದಿಗೆ ಕಂಚು ಪದಕ ಗಳಿಸಿದ್ದಾರೆ.

      2000ನೇ ಇಸವಿಯಲ್ಲಿ ಸಿಡ್ನಿಯಲ್ಲಿ ನಡೆದಿದ್ದ ಒಲಿಂಪಿಕ್ ಗೇಮ್ ನಲ್ಲಿ 69 ಕೆ ಜಿ ವಿಭಾಗದಲ್ಲಿ ಕರ್ಣಂ ಮಲ್ಲೇಶ್ವರಿ ಕಂಚಿನ ಪದಕ ಗಳಿಸಿದ್ದರು.  21 ವರ್ಷಗಳ ಬಳಿಕ ಭಾರತ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಪದಕವೊಂದನ್ನು ಗೆದ್ದ ಸಾಧನೆ ಮಾಡಿದೆ. 

ಸಚಿವ ಡಾ. ನಾರಾಯಣಗೌಡ ಅಭಿನಂದನೆ :

      ಮೀರಾಬಾಯಿ ಚಾನು ಅವರ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಭಾರತೀಯರ ನಿರೀಕ್ಷೆ ಹುಸಿಗೊಳಿಸದ ಮೀರಾ ಅವರು ಮೊದಲ ದಿನವೇ ಬೆಳ್ಳಿ ಪದಕ ಗೆದ್ದು ಶುಭಾರಂಭ ಮಾಡಿದ್ದಾರೆ. ಮೀರಾ ಅವರ ಗೆಲುವು ಭಾರತದ ಎಲ್ಲ ಕ್ರೀಡಾಪಟುಗಳಲ್ಲಿ ಇನ್ನಷ್ಟು ಹುಮ್ಮಸ್ಸು ತುಂಬುವಂತೆ ಮಾಡಿದೆ. ಪದ್ಮಶ್ರೀ, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಿರುವ ಮೀರಾಬಾಯಿ ಚಾನು ಅವರು ಓಲಂಪಿಕ್‍ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಪದಕ ಬೇಟೆಗೆ ನಾಂದಿ ಹಾಡಿದ ಮೀರಾ ಅವರಿಗೆ ಯುವ ಸಬಲೀಕರಣ ಮತ್ತು ಕ್ರೀಡೆ ಸಚಿವ ಡಾ. ನಾರಾಯಣಗೌಡ ಹೃದಯಪೂರ್ವಕವಾಗಿ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap