ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರ…!

ಬೆಂಗಳೂರು

       ತಮ್ಮ ಬೇಡಿಕೆಗಳ ಇಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುವುದು, ಮತ್ತೆ ಆಶ್ವಾಸನೆಗೆ ಬಿದ್ದು ಧರಣಿ ಕೈಬಿಟ್ಟು ಕೆಲಸ ಮಾಡುವುದು, ಮತ್ತೆ ಸಮಸ್ಯೆಗಳಾದಾಗ ಪ್ರತಿಭಟನೆ ನಡೆಸುವುದು ನಡೆಯುತ್ತಲೇ ಇದೆ.

     ಈಗ ವೇತನ ಪರಿಷ್ಕರಣೆ ಹಾಗೂ ಇತರೆ 15 ಬೇಡಿಕೆಗಳ ಕುರಿತು ರಾಜ್ಯ ಸರ್ಕಾರದಿಂದ ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ನಾಲ್ಕು ನಿಗಮಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಎಸ್‌ಆರ್‌ಟಿಸಿ ಮತ್ತು ಕೆಕೆಎಸ್‌ಆರ್‌ಟಿಸಿ ಸಾರಿಗೆ ನೌಕರರು ಅಲ್ಪಾವಧಿಯಲ್ಲಿ ಮುಷ್ಕರ ನಡೆಸಲಿದ್ದಾರೆ.

    ಎಐಟಿಯುಸಿ ಸಂಯೋಜಿತ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮತ್ತು ನೌಕರರ ಫೆಡರೇಶನ್ ಬ್ಯಾನರ್ ಅಡಿಯಲ್ಲಿ ಇತರ ಐದು ಒಕ್ಕೂಟಗಳನ್ನು ಬೆಂಬಲಿಸಿ ಜಂಟಿ ಕ್ರಿಯಾ ಸಮಿತಿಯಡಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ವೇತನ ಪರಿಷ್ಕರಣೆ ಸೇರಿದಂತೆ ತಮ್ಮ 16 ಬೇಡಿಕೆಗಳನ್ನು ಈಡೇರಿಸುವಂತೆ ಫೆಬ್ರವರಿ 4 ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಈ ಸಂಘಟನೆ ಮತ್ತೊಮ್ಮೆ ಪತ್ರ ಬರೆದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ