ಬೆಂಗಳೂರು:
ಪಾಕಿಸ್ತಾನ ಜಿಂದಾಬಾದ್ ಎಂದರೆ ರಾಜ್ಯಸಭಾ ಸೀಟು, ಭಾರತ್ ಮಾತಾ ಕೀ ಜೈ ಎಂದರೆ ಕಲ್ಲೇಟು. ಕರ್ನಾಟಕದಲ್ಲಿ ಭಾರತ್ ಮಾತಾ ಕೀ ಜೈ ಎಂದು ಕೂಗುವುದು ಸುರಕ್ಷಿತವಲ್ಲ. ತುಘಲಕ್ ಯುಗ ಮತ್ತೆ ಬಂದಂತೆ ಭಾಸವಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ.
ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ, ‘ಭಾರತ್ ಮಾತಾ ಕೀ ಜೈ’ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರನ್ನು ಗುಂಪೊಂಡು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ಮಾಡಿ, ಚೂರಿಯಿಂದ ಇರಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರ್‌ನಲ್ಲಿ ನಡೆದಿತ್ತು.
ಈ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ರಾಜ್ಯದಲ್ಲಿ ತುಘಲಕ್ ಆಡಳಿತ ಮರಳಿದೆ ಎಂದು ಟೀಕಿಸಿದೆ.