10 ವರ್ಷದಲ್ಲಿ ಒಂದು ಕೋಟಿ ಉದ್ಯೋಗ ಸೃಷ್ಟಿ : ಸಚಿವ ಡಾ. ಅಶ್ವತ್ಥನಾರಾಯಣ

ಬೆಂಗಳೂರು:


ಜಿಲ್ಲಾ ಮಟ್ಟದಲ್ಲಿ ಹಬ್ ಮತ್ತು ಸ್ಪೋಕ್ ಮಾದರಿಯಲ್ಲಿ ಉದ್ಯಮಶೀಲತಾ ವಿಕಸನ ಕೇಂದ್ರ ಸ್ಥಾಪಿಸಲಾಗುವುದು ಎಂದು ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
9ನೇ ತರಗತಿಯಿಂದ ಪಿಯುಸಿವರೆಗೆ ಉದ್ಯಮಶೀಲತೆ ಬೆಳವಣಿಗೆಯನ್ನು ತಿಳಿಸುವ ಪಠ್ಯಕ್ರಮ ಮತ್ತು 8ನೇ ತರಗತಿಯಿಂದ ಪದವಿಯವರೆಗೂ ವೃತ್ತಿ ಮಾರ್ಗದರ್ಶನ ಕಡ್ಡಾಯಗೊಳಿಸಬೇಕು ಸೇರಿದಂತೆ ಹಲವು ಶಿಫಾರಸು ಒಳಗೊಂಡ ಕೌಶಲ, ಉದ್ಯಮಶೀಲತೆ ಮತ್ತು ನವೋದ್ಯಮ ಕಾರ್ಯಪಡೆಯ ಅಧ್ಯಕ್ಷರಾದ ಉದ್ಯಮಶೀಲತೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್ ಸಲ್ಲಿಸಿದ ವರದಿ ಸ್ವೀಕರಿಸಿ ಮಾತನಾಡಿದರು.
10 ವರ್ಷದಲ್ಲಿ ಒಂದು ಕೋಟಿ ಉದ್ಯೋಗ ಸೃಷ್ಟಿ ಸರಕಾರದ ಗುರಿ. ಕೃಷಿ ಸೇರಿದಂತೆ ಎಲ್ಲ ವಲಯಗಳಲ್ಲಿ ಉದ್ಯೋಗ ಅವಕಾಶ ಸಾಧ್ಯತೆ ಇದೆ. ಇದನ್ನು ಕಾರ್ಯಗತಗೊಳಿಸಲು ಕಾರ್ಯ ಪ್ರವೃತ್ತ ಆಗುತ್ತೇವೆ ಎಂದು ತಿಳಿಸಿದ ಅವರು, ವಿದ್ಯಾರ್ಥಿಗಳ ಉಜ್ವಲ ಭವಿಷ್ಯ, ನಿರುದ್ಯೋಗ ನಿವಾರಣೆ ಮತ್ತು ಗುಣಮಟ್ಟದ ಶಿಕ್ಷಣ ಸಾಧ್ಯವಾಗಬೇಕಾದರೆ ಕಲಿಕೆ ಹಂತದಿAದಲೇ ಕೌಶಲವನ್ನು ಕಲಿಸುವ ಜತೆಗೆ ಉದ್ಯಮಶೀಲ ಮನೋಭಾವ ಬೆಳೆಸಬೇಕಾಗಿದೆ. ಹೀಗಾಗಿ, ಕಾರ್ಯಪಡೆಯ ಶಿಫಾರಸಿನಂತೆ ಜಿಲ್ಲಾ ಮಟ್ಟದಲ್ಲಿ ಹಬ್ ಮತ್ತು ಸ್ಪೋಕ್ ಮಾದರಿಯಲ್ಲಿ ಉದ್ಯಮಶೀಲತಾ ವಿಕಸನ ಕೇಂದ್ರ ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ರಾಜ್ಯ ಸ್ಟಾರ್ಟಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಜೀವನೋಪಾಯ ಇಲಾಖೆ ಮಿಷನ್ ನಿರ್ದೇಶಕಿ ಮಂಜುಶ್ರೀ, ಜಿಟಿಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ, ಕಾರ್ಯಪಡೆ ಸಂಚಾಲಕ ಮದನ್ ಪದಕಿ ಇದ್ದರು.

Recent Articles

spot_img

Related Stories

Share via
Copy link
Powered by Social Snap