ಚಿಕ್ಕಮಗಳೂರು ರೆಸಾರ್ಟ್‌ನಲ್ಲಿ ಈಜುಕೊಳ ದುರಂತ, ಒಬ್ಬ ಸಾವು

ಚಿಕ್ಕಮಗಳೂರು:

    ಮಂಗಳೂರಿನ ರೆಸಾರ್ಟ್‌ನಲ್ಲಿ ಕೆಲ ತಿಂಗಳ ಹಿಂದೆ ನಡೆದ ಈಜುಕೊಳ  ದುರಂತವನ್ನು ನೆನಪಿಸುವ ಮತ್ತೊಂದು ಘೋರ ಘಟನೆ ನಡೆದಿದೆ. ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಬಿದ್ದು ಪ್ರವಾಸಿಗರೊಬ್ಬರು  ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ ಸ್ವಿಮ್ಮಿಂಗ್ ಪೂಲ್‌ನಲ್ಲಿ ಬಿದ್ದು ಮಡಿಕೇರಿ ಕುಶಾಲನಗರ ಮೂಲದ ಪ್ರವಾಸಿ ನಿಶಾಂತ್ ಮೃತಪಟ್ಟಿದ್ದಾರೆ.

   ನಿಶಾಂತ್ ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ ಸ್ನೇಹಿತನ ಜೊತೆ ತೆರಳಿದ್ದರು. ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್‌ನಲ್ಲಿ ಸ್ವಿಮ್ಮಿಂಗ್ ಪೂಲ್‌ಗೆ ಹಾರುವ ವೇಳೆ ತಲೆ ಟ್ವಿಸ್ಟ್ ಆಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ನೀರಿಗೆ ಹಾರಿದ ಸುಶಾಂತ್ ಅಲುಗಾಡದೇ ಇದ್ದಾಗ ಕೂಡಲೇ ಮೇಲಕ್ಕೆತ್ತಿದ್ದಾರೆ. ಆದರೆ ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿರುವುದು ಗೊತ್ತಾಗಿದೆ. ಈ ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.