ಚಿಕ್ಕಮಗಳೂರು:
ಉತ್ತರ ಕನ್ನಡದ ಶಿರೂರು ಕೇರಳದ ವಯನಾಡು ಪ್ರಕರಣ ಬೆನ್ನಲ್ಲೇ ಕಾಫಿನಾಡಿನ ಜಿಲ್ಲಾಡಳಿತ ಹೈ ಅಲರ್ಟ್ ಆಗಿದೆ. ಚಾರ್ಮಾಡಿ ಘಾಟ್ ಆರಂಭದ ಸ್ಥಳವಾದ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಳಿ ಡಿಆರ್ ತುಡಿಯನ್ನು ನಿಯೋಜಿಸಿದೆ.
ನಿರಂತರ ಧಾರಾಕಾರ ಮಳೆಯಿಂದ ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಬೆಟ್ಟಗುಡ್ಡಗಳ ಮಾರ್ಗ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಯಾವ ಕ್ಷಣದಲ್ಲಿ ಬೇಕಾದರೂ ಯಾವುದೇ ರೀತಿಯ ಅನಾಹುತ ಸಂಭವಿಸುವ ಸಾಧ್ಯತೆ ಇರುವುರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.
ಡಿಆರ್ ವ್ಯಾನ್‌ನಲ್ಲಿ ಯಾವಾಗಲೂ ಓರ್ವ ಅಧಿಕಾರಿ ಸೇರಿ 7-8 ಸಿಬ್ಬಂದಿ ಇರುತ್ತಾರೆ. ಒಂದು ವೇಳೆ ಭಾರೀ ಮಳೆಯಿಂದ ಚಾರ್ಮಾಡಿ ಘಾಟಿಯಲ್ಲಿ ಏನಾದರೂ ಅನಾಹುತ ಸಂಭವಿಸದರೆ ತಕ್ಷಣ ಅಲ್ಲಿನವರ ಸಹಾಯಕ್ಕೆ ಪೊಲೀಸರು ಅಲರ್ಟ್ ಅಗಲಿದ್ದಾರೆ. ಈ ಕಾರಣಕ್ಕೆ ಕೊಟ್ಟಿಗೆಹಾರದಲ್ಲೇ ಒಂದು ವ್ಯಾನ್ ನಿಯೋಜಿಸಿದ್ದಾರೆ.