ನವದೆಹಲಿ:
‘ಒಂದು ರಾಷ್ಟ್ರ, ಚುನಾವಣೆ ಇಲ್ಲ’ ಎಂಬ ಉದ್ದೇಶದಿಂದ ಸಂವಿಧಾನವನ್ನು ಸಂಪೂರ್ಣವಾಗಿ ನಾಶಮಾಡಲು ಬಿಜೆಪಿ ಬಯಸುತ್ತಿದೆ ಎಂದು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ, ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಶಿಫಾರಸು ಮಾಡಿದ ನಂತರ ಕಾಂಗ್ರೆಸ್ ಗುರುವಾರ ವಾಗ್ದಾಳಿ ನಡೆಸಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ ಸುಮಾರು 18,000 ಪುಟಗಳ ವರದಿಯಲ್ಲಿ, ಕೋವಿಂದ್ ನೇತೃತ್ವದ ಸಮಿತಿ, ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಮತ್ತು 100 ದಿನಗಳ ಅಂತರದಲ್ಲಿ ಪುರಸಭೆ ಚುನಾವಣೆ ನಡೆಸುವಂತೆ ವರದಿಯಲ್ಲಿ ಶಿಫಾರಸು ಮಾಡಲಾಗಿದೆ.
ಈ ಬಗ್ಗೆ ನಾಸಿಕ್‌ನಲ್ಲಿ ಪಿಟಿಐಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಪ್ರಧಾನಿ ಅವರ ಉದ್ದೇಶ ತುಂಬಾ ಸ್ಪಷ್ಟವಾಗಿದೆ. ಅವರು ಸ್ಪಷ್ಟ ಬಹುಮತ, ಮೂರನೇ ಎರಡರಷ್ಟು ಬಹುಮತ ಮತ್ತು 400 ಸ್ಥಾನಗಳನ್ನು ಕೇಳುತ್ತಿದ್ದಾರೆ. ಅವರು ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ಸಂಪೂರ್ಣವಾಗಿ ನಾಶಮಾಡಲು ಬಯಸುತ್ತಾರೆ ಮತ್ತು ‘ಒಂದು ರಾಷ್ಟ್ರ, ಚುನಾವಣೆ ಇಲ್ಲ’ ಎಂಬುದು ಉದ್ದೇಶ ಎಂದು ಹೇಳಿದ್ದಾರೆ.
ಇದು ರಾಜಕೀಯ ವಿಷಯವಲ್ಲ. ಹಣ ಮತ್ತು ಇತರ ಸಂಪನ್ಮೂಲಗಳನ್ನು ಉಳಿಸುವ ಗುರಿ ಹೊಂದಿದೆ ಎಂದು ಬಿಜೆಪಿ ವಕ್ತಾರ ನಳಿನ್ ಕೊಹ್ಲಿ ಅವರು ಹೇಳಿದ್ದಾರೆ.