ಮಂಡ್ಯ:
ಮಂಡ್ಯ ತಾಲೂಕಿನ ಜಿ ಕೆಬ್ಬಳ್ಳಿ ಗ್ರಾಮದಲ್ಲಿ ಸಂಗ್ರಹಿಸಿಟ್ಟಿದ್ದ ಪಟಾಕಿ ಸ್ಫೋಟಗೊಂಡು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.ಮೃತನನ್ನು ತಮಿಳುನಾಡು ಮೂಲದ 67 ವರ್ಷದ ರಮೇಶ್ ಎಂದು ತಿಳಿದುಬಂದಿದೆ. ನಾಗಲಿಂಗ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆಬ್ಬಳ್ಳಿ ಗ್ರಾಮದಲ್ಲಿ ಕಾಲಭೈರವೇಶ್ವರ ಹಬ್ಬಕ್ಕೆಂದು ಪಟಾಕಿ ಸಿಡಿಸಲು ತಮಿಳುನಾಡಿನಿಂದ ನಾಲ್ವರು ಆಗಮಿಸಿದ್ದರು. ನಿನ್ನೆ ರಾತ್ರಿ ಗ್ರಾಮದಲ್ಲಿ ಹಬ್ಬ ಮುಗಿದ ನಂತರ ಆಲೆಮನೆಯೊಂದರಲ್ಲಿ ನಾಲ್ವರು ಮಲಗಿದ್ದರು. ಇಂದು ಬೇರೊಂದು ಗ್ರಾಮಕ್ಕೆ ಹೋಗಲು ಪಟಾಕಿಗಳ ತುಂಬುವಾಗ ಸ್ಪೋಟ ಸಂಭವಿಸಿದೆ.
ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಇನ್ನು ಸ್ಥಳಕ್ಕೆ ಮಂಡ್ಯ ಜಿಲ್ಲಾಧಿಕಾರಿ ಡಾ ಕುಮಾರ್, ಎಸ್ ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.