ರಾಮನಗರ:
ವಸತಿ ಶಾಲೆ ಗೋಡೆ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಗುರುವಾರ ರಾಮನಗರದಲ್ಲಿ ನಡೆದಿದೆ.
ರಾಮನಗರದ ಹೊಸೂರು ಗೊಲ್ಲಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಬೆಳಗ್ಗೆ ಸ್ನಾನಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ. ವಿದ್ಯಾರ್ಥಿ ಕೌಶಿಕ್ ಗೌಡ (12) ಮೃತ ದುರ್ದೈವಿ. ನೀರು ಸಂಗ್ರಹಕ್ಕೆ ತಡೆಗೋಡೆ ನಿರ್ಮಿಸಲಾಗಿತ್ತು. ನೀರಿನ ಪ್ರಮಾಣ ತಡೆಯಲಾಗದೇ ಗೋಡೆ ಕುಸಿದಿದೆ ಎಂದು ಹೇಳಲಾಗಿದೆ.
ಘಟನೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆಳಿಗ್ಗೆ 8.30ರ ಸುಮಾರಿಗೆ ತೊಟ್ಟಿ ಬಳಿ ಕೌಶಿಕ್ ಸೇರಿದಂತೆ ಇಬ್ಬರು ವಿದ್ಯಾರ್ಥಿಗಳು ಮುಖ ತೊಳೆಯುತ್ತಿದ್ದರು. ಆಗ, ಐದು ಅಡಿ ಎತ್ತರವಿರುವ ತೊಟ್ಟಿಯ ಶಿಥಿಲಗೊಂಡ ಗೋಡೆ ವಿದ್ಯಾರ್ಥಿಗಳ ಮೇಲೆ ಉರುಳಿದೆ. ಗೋಡೆಯ ಅವಶೇಷಗಳಡಿ ಸಿಲುಕಿದ್ದ ತೀವ್ರವಾಗಿ ಗಾಯಗೊಂಡಿದ್ದ ಕೌಶಿಕ್, ದಯಾನಂದ ಸಾಗರ್ ಸಾಗರ್ ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾನೆ. ಮೃತ ವಿದ್ಯಾರ್ಥಿಯ ಶವವನ್ನ ದಯಾನಂದ ಆಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ.
ಮತ್ತೊಬ್ಬ ವಿದ್ಯಾರ್ಥಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಿಡದಿ ಠಾಣೆ ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ