ಅವಂತಿಪೋರಾ:
ಕಣಿವೆ ರಾಜ್ಯದಲ್ಲಿ ಮತ್ತೆ ಗುಂಡಿನ ಶಬ್ದ ಕೇಳಿಸಿದ್ದು ಅವಂತಿಪೋರಾದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡೆಯುತ್ತಿರುವ ಗುಂಡಿನ ಕಾಳಗದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ವರದಿಯಾಗಿದೆ. ಅದರೆ ಉಗ್ರನ ಮೃತದೇಹ ಇನ್ನೂ ಪತ್ತೆಯಾಗಿಲ್ಲ.
ಪುಲ್ವಾಮಾ ಜಿಲ್ಲೆಯಲ್ಲಿ ಕಾಶ್ಮೀರ ಪಂಡಿತರೊಬ್ಬರನ್ನು ಉಗ್ರರು ಗುಂಡಿಕ್ಕಿ ಹತ್ಯೆಗೈದ ಮಾರನೇ ದಿನ ಅವಂತಿಪೋರಾದಲ್ಲಿ ಇಂದು ಮುಂಜಾನೆ ಕಾರ್ಯಾಚರಣೆ ಆರಂಭಿಸಲಾಗಿದೆ. ಪೊಲೀಸ್ ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯಲ್ಲಿ ತೊಡಗಿರುವುದಾಗಿ ಕಾಶ್ಮೀರ ವಲಯ ಅಧಿಕಾರಿ ಟ್ವೀಟರ್ ನಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
