ಬೆಂಗಳೂರು :
ಲಕ್ಷಗಟ್ಟಲೆ ಹಣ ಸಾಲ ಮಾಡಿಕೊಂಡು ಅದನ್ನು ಆನ್‌ಲೈನ್ ಬೆಟ್ಟಿಂಗ್‌ಗೆ ಚೆಲ್ಲಿ ಆತ್ಮಹತ್ಯೆಗೆ ಶರಣಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಬೆಂಗಳೂರಿನಲ್ಲಿ ಖಾಸಗಿ ಬ್ಯಾಂಕ್ ಉದ್ಯೋಗಿ ಒಬ್ಬರು ತಾನು ಕೆಲಸ ಮಾಡುವ ಬ್ಯಾಂಕ್‌ನಲ್ಲೆ ಸಾಲ ಪಡೆದು ಸಾಲ ತೀರಿಸಲಾಗದೆ ಬೆಟ್ಟಿಂಗ್‌ನಲ್ಲಿ ಸೋತು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.
ಬೆಂಗಳೂರಿನಲ್ಲಿ ಖಾಸಗಿ ಬ್ಯಾಂಕ್ ಉದ್ಯೋಗಿ ಮನೋಜ್ ಕುಮಾರ್ (25) ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್‌ನಿಂದ ಲೋನ್ ಪಡೆದು ಮೃತ ಮನೋಜ್ ಕುಮಾರ್ ಬೆಟ್ಟಿಂಗ್ ಆಡುತ್ತಿದ್ದರು. ಬೆಟ್ಟಿಂಗ್‌ನಲ್ಲಿ ಲಕ್ಷಾಂತರ ಹಣ ಕಳೆದುಕೊಂಡಿದ್ದ ಮನೋಜ್ ಕುಮಾರ್ ಮನನೊಂದು ನೇಣಿಗೆ ಶರಣಾಗಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆ ಕುರಿತು ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.