ನವದೆಹಲಿ:
ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಾರತೀಯ ಸೇನೆ ಇಂದು ತಡರಾತ್ರಿ ʻಆಪರೇಷನ್ ಸಿಂಧೂರ್ʼ ದಾಳಿಯನ್ನು ನಡೆಸಿದೆ. ಈ ಡೆಡ್ಲಿ ಅಟ್ಯಾಕ್‌ನಲ್ಲಿ ಈಗಾಗಲೇ ನೂರಕ್ಕೂ ಅಧಿಕ ಉಗ್ರರು ಉಡೀಸ್ ಆಗಿದ್ದೂ, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದೀಗ ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಮೊದಲ ರಿಯಾಕ್ಷನ್ ನೀಡಿದ್ದಾರೆ. ಆಪರೇಷನ್ ಸಿಂಧೂರ್ ಬಗ್ಗೆ ಕಾಂಗ್ರೆಸ್ ಸಂಸದ ಮತ್ತು ಲೋಕಸಭಾ ನಾಯಕ ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ನಮ್ಮ ಸಶಸ್ತ್ರ ಪಡೆಗಳ ಬಗ್ಗೆ ನಮಗೆ ಹೆಮ್ಮೆ ಇದೆ. ಜೈ ಹಿಂದ್!” ಎಂದು ಹೇಳಿದ್ದಾರೆ.
ಪಹಲ್ಗಾಮ್ ದಾಳಿಗೆ ಸೇಡು ತೀರಿಸಿಕೊಂಡಿರುವ ಭಾರತ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ 9 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕ್ಷಿಪಣಿ ದಾಳಿ ನಡೆಸಿದ ಭಾರತ ಉಗ್ರರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದೆ. ಯಾವುದೇ ಸೂಚನೆ ಇಲ್ಲದೆ ಸುಮಾರು 20 ನಿಮಿಷಗಳ ಕಾಲ ನಡೆದ ಈ ದಾಳಿಯಿಂದ ಪಾಕ್ ಪತರುಗುಟ್ಟಿ ಹೋಗಿದೆ. ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ಸರಣಿ ನಿಖರ ದಾಳಿಯಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಾಕಿಸ್ತಾನ ಹಾಗೂ POK ಅಲ್ಲಿರುವ 9 ಸ್ಥಳಗಳಾದ ಕೊಟ್ಪಿ, ಮುಜಾಫರ್‌ಬಾದ್, ಬಹವಲ್ಪುರ್ ಬಳಿ ಏರ್‌ಸ್ಟ್ರೈಕ್ ನಡೆದಿದೆ. ಲಷ್ಕರ್ ಎ ತೊಯ್ಬಾ ಮತ್ತು ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಗಳ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ಮಾಡಿದೆ.
