ನಿನ್ನೆ ಕಾರ್ಯಕ್ರಮವೊಂದದರಲ್ಲಿ ಮಾತನಾಡುವಾಗ ಸಿಎಂ ಸಿದ್ದರಾಮಯ್ಯ ಬಿಜೆಪಿ ಆಪರೇಷನ್ ಕಮಲದ ಬಗ್ಗೆ ಗಂಭೀರ ಆರೋಪ ಮಾಡಿದ್ದರು.ಬಿಜೆಪಿಯವರು ಹೇಗಾದರೂ ಮಾಡಿ ನಮ್ಮ ಸರ್ಕಾರ ಉರುಳಿಸಬೇಕು ಎಂದು ಪ್ರಯತ್ನ ನಡೆಸುತ್ತಿದ್ದಾರೆ. ನಮ್ಮ ಶಾಸಕರಿಗೆ 50 ಕೋಟಿ ರೂ. ಆಫರ್ ನೀಡಿದ್ದರು. ಅದು ಸಫಲರಾಗದೇ ಇದ್ದಾಗ ನನ್ನ ಮೇಲೆ ಸುಳ್ಳು ಕೇಸ್ ಹಾಕಿ ಅಲುಗಾಡಿಸುವ ಪ್ರಯತ್ನ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ್ದ ಸಚಿವ ರಾಜಣ್ಣ ಕೂಡಾ ಸಿದ್ದರಾಮಯ್ಯನವರೇ ಹೇಳಿದ್ದಾರೆ ಎಂದರೆ ಅದು ಸತ್ಯವಿರಲೇಬೇಕು ಎಂದಿದ್ದಾರೆ. ಆದರೆ ಸಚಿವ ಸತೀಶ್ ಜಾರಕಿಹೊಳಿ 50 ಕೋಟಿ ಆಫರ್ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
