OPS ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರದಿಂದ ಸಿಹಿ ಸುದ್ದಿ ….!

ಬೆಂಗಳೂರು :

    ದಿನಾಂಕ 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ಆದೇಶವನ್ನು ಹೊರಡಿ ಸಲಾಗಿದೆ.

   ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ದಿನಾಂಕ: 01.04.2006ರ ಪೂರ್ವದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ: 01.04.2006ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ ಕೆಲವು ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಲು ಒಪ್ಪಿಗೆ ನೀಡಿ ಆದೇಶಿಸಲಾಗಿದೆ.

   ಸದರಿ ಆದೇಶದನ್ವಯ ನೌಕರರು ತಮ್ಮ ಅಭಿಮತವನ್ನು ಚಲಾಯಿಸಲು ಕೊನೆಯ ದಿನಾಂಕ: 30.06.2024 ಆಗಿರುತ್ತದೆ. ನೌಕರರ ಆಯ್ಕೆಗನುಸಾರ ಅವರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಲು ನಿಗಧಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ದಿನಾಂಕ: 31.07.2024 ರೊಳಗಾಗಿ ಅಂತಹ ನೌಕರರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಿಸಲು ತಮ್ಮ ಶಿಫಾರಸ್ಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಢೀಕೃತ ಪುಸ್ತಾವನೆಯನ್ನು ಸಲ್ಲಿಸತಕ್ಕದ್ದು ಎಂದು ತಿಳಿಸಲಾಗಿದೆ.

 ನಂತರ ಇಲಾಖಾ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಂದ ಸ್ವೀಕೃತವಾದ ಪುಸ್ತಾವನೆಗಳನ್ನು ಪರಿಶೀಲಿಸಿ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಅರ್ಹ ನೌಕರರ ಪಟ್ಟಿಯನ್ನು ದಿನಾಂಕ: 31.08.2024ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸತಕ್ಕದ್ದು ಎಂದು ತಿಳಿಸಲಾಗಿದೆ.

 ಆದರೆ, ಪುಸ್ತುತ ಕೆಲವು ಇಲಾಖೆಗಳು ನೌಕರರು ಒಪಿಎಸ್‌ಗೆ ಒಳಪಡುತ್ತಾರೆ ಎಂದು ಶಿಫಾರಸ್ಸು ಮಾಡದೇ, ಕ್ರೋಢೀಕೃತ ಪುಸ್ತಾವನೆಯನ್ನು ಸಲ್ಲಿಸದೇ, ಸ್ವೀಕೃತವಾಗಿರುವ ನೌಕರರ ಮನವಿಗಳನ್ನು ಮತ್ತು ಕೇವಲ ಒಂದು ಶಾಖೆಗೆ ಸಂಬಂಧಿಸಿದ ಪುಸ್ತಾವನೆಗಳನ್ನು ಮಾತ್ರ ಆರ್ಥಿಕ ಇಲಾಖೆಯ ಅಭಿಪ್ರಾಯ ಕೋರುತ್ತಿರುವುದು ಕಂಡುಬಂದಿರುತ್ತದೆ.

 ಆದ್ದರಿಂದ, ದಿನಾಂಕ: 24.01.2024ರ ಆದೇಶದನ್ವಯ ಎನ್.ಪಿ.ಎಸ್. ನಿಂದ ಒಪಿಎಸ್ ಗೆ ಒಳಪಡಲು ಅಭಿಮತ ಸಲ್ಲಿಸಿರುವ ಎಲ್ಲಾ ವೃಂದಗಳ ಅಂದರೆ, ಗ್ರೂಪ್ ಎ, ಬಿ, ಸಿ ಮತ್ತು ಡಿ ಅಧಿಕಾರಿ/ನೌಕರರುಗಳ ಕ್ರೋಢೀಕೃತ ಪ್ರಸ್ತಾವನೆಗಳನ್ನು ಇದರೊಂದಿಗೆ ಲಗತ್ತಿಸಿರುವ ನಮೂನೆಗಳಲ್ಲಿ ಇಲಾಖಾ ಮುಖ್ಯಸ್ಥರು ದೃಢೀಕರಿಸಿ ದಿನಾಂಕ: 31.08.2024ರೊಳಗೆ ಸಲ್ಲಿಸುವಂತೆ ಕೋರಲಾಗಿದೆ ಅಂತ ತಿಳಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap