ಬೆಂಗಳೂರು : ರಾಜ್ಯದ ಈ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್

ಬೆಂಗಳೂರು:

    ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಅಬ್ಬರಿಸಿದ್ದ ವರುಣ ಶುಕ್ರವಾರ ಕೊಂಚ ಬಿಡುವು ನೀಡಿದ್ದಾನೆ. ಆದರೆ, ಇದೀಗ ಮತ್ತೆ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾರ್ಭಟದ ಮುನ್ಸೂಚನೆ ಸಿಕ್ಕಿದ್ದು, ಅ.23ರವರೆಗೆ ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇದರಿಂದ ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

   ಇನ್ನು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಅ.21ರವರೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಅ.19ರಂದು ತುಮಕೂರು, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ರಾಯಚೂರು, ಬಾಗಲಕೋಟೆ, ಗದಗ, ಕೊಪ್ಪಳ, ಧಾರವಾಡ, ಬೆಳಗಾವಿ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಸೇರಿ ಹಲವೆಡೆ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಹಾಗೆಯೇ ಕರಾವಳಿ ಕರ್ನಾಟಕದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

   ಅದೇ ರೀತಿ ಅ.20ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

   ಇನ್ನು ಅ.21ರಂದು ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾಸನ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

   ಅ.22ರಂ ದುಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಅ.24ರವರೆಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

  ಕರ್ನಾಟಕ ಕರಾವಳಿಯಲ್ಲಿ 35 ಕಿ.ಮೀ.ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಚಂಡಮಾರುತದ ವಾತಾವರಣವಿದೆ. ಮುಂದಿನ 2 ದಿನಗಳ ಕಾಲ ರಾಜ್ಯದ ಮೇಲೆ ಯಾವುದೇ ಮಹತ್ವದ ಬದಲಾವಣೆಯನ್ನು ನಿರೀಕ್ಷಿಸಲಾಗಿಲ್ಲ.ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29° C ಮತ್ತು 20° C ಆಗಿರಬಹುದು.

   ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29° C ಮತ್ತು 20° C ಆಗಿರಬಹುದು.

Recent Articles

spot_img

Related Stories

Share via
Copy link
Powered by Social Snap