ಬೆಂಗಳೂರು ಸೇರಿದಂತೆ ವಿವಿದೆಡೆ ಆರೇಂಜ್‌ ಅಲರ್ಟ್‌ ಘೋಷಣೆ..!

ಬೆಂಗಳೂರು:

      ಇಂದು ಸಂಜೆಯ ವೇಳೆಗೆ ಮತ್ತೆ ಮಳೆ ಶುರುವಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

    ಕೊಲ್ಲೂರು, ಉಡುಪಿ, ಕಾರ್ಕಳ, ಬೆಳ್ತಂಗಡಿ, ಹುಬ್ಬಳ್ಳಿ, ಬೈಲಹೊಂಗಲ, ಕಮಲಾಪುರ, ಕಮಲಾಪುರ, ನರಗುಂದ, ತಿಪಟೂರು, ಬಂಡೀಪುರ, ಹುಬ್ಬಳ್ಳಿ, ಬಂಡೀಪುರ, ಚಿಂತಾಪುಣಿ, ಕಡೂರು, ಹೊನ್ನಾವರ, ಕೋಟ, ಮಾಣಿ, ಕುಂದಗೋಳ, ಚಿಂಚೋಳಿ, ಗದಗ, ರಾಯಭಾಗ, ಸಂಕೇಶ್ವರ, ಮಿಡಿಗೇಶಿ, ದೇವನಹಳ್ಳಿ, ಬರಗೂರು, ಚನ್ನಗಿರಿ, ತ್ಯಾಗರ್ತಿಯಲ್ಲಿ ಮಳೆಯಾಗಿದೆ. 

ಚಿಕ್ಕಬಳ್ಳಾಪುರ, ಅಜ್ಜಂಪುರ, ರಾಮನಗರ, ಎನ್​ಆರ್​ಪುರ, ಭದ್ರಾವತಿ, ನಾಯಕನಹಟ್ಟಿ, ಬೇಲೂರು, ಪೊಲ್ಲಂಪೇಟೆ, ಕೊಟ್ಟಿಗೆಹಾರ, ಸೋಮವಾರಪೇಟೆಯಲ್ಲಿ ಮಳೆಯಾಗಿದೆ. ಹಾವೇರಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 17.04 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

   ಎಚ್​ಎಎಲ್​ನಲ್ಲಿ 22.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 21.9ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 23.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 24.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

  ಹೊನ್ನಾವರದಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.7ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 28.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 

   ಬೀದರ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

   ಧಾರವಾಡದಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 27.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 28.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Recent Articles

spot_img

Related Stories

Share via
Copy link