ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣದ ಲಾಭ ಪಡೆಯಲು ಬೇರೆಯವರಿಗೆ ಅವಕಾಶ ನೀಡಬಾರದು: ಡಿಕೆಶಿ

ಬೆಂಗಳೂರು:

ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣದ ಲಾಭ ಪಡೆಯುವುದಕ್ಕೆ ಬೇರೆಯವರಿಗೆ ಅವಕಾಶ ನೀಡಬಾರದು. ಶಾಂತಿ ಕಾಪಾಡುವುದಕ್ಕೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕುವೆಂಪು ಅವರು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಎಂದು ಕರೆದಿದ್ದಾರೆ. ಶಾಂತಿ ಸುವ್ಯವಸ್ಥೆ ಕದಡುವುದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಹೇಳಿದರು.

ಘಟನೆಗೆ ಸಂಬಂಧಪಟ್ಟಂತೆ ಸ್ಥಳೀಯ ನಾಯಕರಿಂದ ಮಾಹಿತಿ ಪಡೆದಿದ್ದೇನೆ. ತಕ್ಷಣ ಸೆಕ್ಷನ್ 144 ಜಾರಿಗೊಳಿಸಬೇಕು, ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಾಜೀನಾಮೆಗೆ ಆಗ್ರಹ :

ಘಟನೆಗೆ ಸಂಬಂಧಪಟ್ಟಂತೆ ಗೃಹ ಸಚಿವ ಆರಗ‌ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದು ಶಾಸಕ ಪ್ರಿಯಾಂಕ ಖರ್ಗೆ ಆಗ್ರಹಿಸಿದ್ದಾರೆ.

ಗೃಹ ಸಚಿವರ ತವರು ಜಿಲ್ಲೆಯಲ್ಲಿ ಪದೇ ಪದೇ ಇಂಥ ಘಟನೆಗಳು ನಡೆಯುತ್ತಿವೆ. ಇದು ಗುಪ್ತಚರ ವ್ಯವಸ್ಥೆಯ ವೈಫಲ್ಯ ಎಂದು ಆರೋಪಿಸಿದ್ದಾರೆ.

ಈ ವೇಳೆ ಶಾಂತಿಯುತ ವಾತಾವರಣ ನಿರ್ಮಿಸಲು ಅಗತ್ಯ ಕ್ರಮ ವಹಿಸುವಂತೆ ಅರಗ ಜ್ಞಾನೇಂದ್ರಗೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಶಾಲಾ ಕಾಲೇಜುಗಳಿಗೆ ರಜೆ ಮತ್ತು ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯ ಬಗ್ಗೆಯೂ ಮಾಹಿತಿ ನೀಡಿದ ಗೃಹ ಸಚಿವರು ಮಾಹಿತಿ ನೀಡಿದ್ದು, ಘಟನೆ ಸಂಬಂಧ 10.30ಕ್ಕೆ ಸುದ್ದಿಗೊಷ್ಠಿ ನಡೆಸುವ ಬಗ್ಗೆಯೂ ಸಿಎಂಗೆ ಆರಗ ಮಾಹಿತಿ ನೀಡಿದ್ದಾರೆ.

        ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link