2047ರ ವೇಳೆಗೆ ವಿಕಸಿತ ಭಾರತ ನಮ್ಮ ಗುರಿಯಾಗಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ:

    ‘2047ರ ವೇಳೆಗೆ ವಿಕಸಿತ ಭಾರತ’ ನಮ್ಮ ಗುರಿಯಾಗಿದ್ದು, ದೇಶದ 140 ಕೋಟಿ ಜನರಿಂದ ಹೊಸ ಭಾರತ ನಿರ್ಮಾಣವಾಗಲಿದೆ’ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದರು.

78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ಮೋದಿಯವರು ಭಾಷಣ ಮಾಡಿದರು.

ಇಂದು ಸ್ವಾತಂತ್ರ್ಯ ಹೋರಾಟಗಾರರಿಗೆ ನಮನ ಸಲ್ಲಿಸುವ ಪರ್ವ. ರಾಷ್ಟ್ರದ ನಿರ್ಮಾಣಕ್ಕಾಗಿ ಹಲವರು ಪ್ರಾಣತ್ಯಾಗ ಮಾಡಿದ್ದಾರೆ. ದೇಶದ ಸ್ವಾತಂತ್ರ್ಯ ಸೇನಾನಿಗಳಿಗೆ ಹೃದಯಪೂರ್ವಕ ನಮನ. ಭಾರತದ ಸ್ವಾತಂತ್ರ್ಯ ಸೇನಾನಿಗಳಿಗೆ ನಾವು ಋಣಿಯಾಗಿದ್ದೇವೆ. ರಾಷ್ಟ್ರದ ರಕ್ಷಣೆಗೆ ಯೋಗದಾನ ನೀಡಿದವರಿಗೂ ನನ್ನ ನಮನಗಳು ಎಂದು ಹೇಳಿದರು.

ಕಳೆದ ಕೆಲವು ವರ್ಷಗಳಿಂದ ನೈಸರ್ಗಿಕ ವಿಕೋಪಗಳು ನಮ್ಮ ಕಳವಳಗಳನ್ನು ಹೆಚ್ಚಿಸಿವೆ. ಇದರಿಂದ ಹಾನಿಗೊಳಗಾದ ಕುಟುಂಬಗಳಿಗೆ ನನ್ನ ಸಂತಾಪಗಳನ್ನು ಸೂಚಿಸುತ್ತೇನೆ. ನೈಸರ್ಗಿಕ ವಿಕೋಪಗಳಿಂದಾಗಿ ನಮ್ಮ ಆತಂಕ ಹೆಚ್ಚುತ್ತಿದೆ. ಅನೇಕ ಜನರು ಇದರಿಂದ ತಮ್ಮ ಕುಟುಂಬಗಳು, ಆಸ್ತಿಗಳನ್ನು ಕಳೆದುಕೊಂಡಿದ್ದಾರೆ. ದೇಶ ಕೂಡ ನಷ್ಟಗಳನ್ನು ಅನುಭವಿಸಿದೆ. ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಈ ದೇಶ ಅವರ ಜತೆಗೆ ಇದೆ ಎಂದು ನಾನು ಅವರಿಗೆ ಭರವಸೆ ನೀಡುತ್ತೇನೆ.

Recent Articles

spot_img

Related Stories

Share via
Copy link