ಮಂಗಳೂರು:
ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ಮತ್ತೊಮ್ಮೆ ಎಚ್‌ಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಸೋಮವಾರ ಮತದಾರರಲ್ಲಿ ಮನವಿ ಮಾಡಿದ್ದಾರೆ.
ಮಂಗಳೂರು ಉತ್ತರ ಕ್ಷೇತ್ರದಲ್ಲಿ ಜೆಡಿಎಸ್ ಸಮಾವೇಶ ಉದ್ದೇಶಿಸಿ ಮಾತನಾಡಿದ ದೇವೇಗೌಡರು, ಕಾರ್ಯಕರ್ತರು ವಿಶ್ರಾಂತಿ ಪಡೆಯದೆ ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದರು.
ಮೋದಿ ವಿರುದ್ಧ ನಾನು ಯಾವುದೇ ವೈಯಕ್ತಿಕ ಟೀಕೆ ಮಾಡುವುದಿಲ್ಲ. ಅವರಿಗೆ ಮಾತನಾಡುವ ಸ್ವಾತಂತ್ರ್ಯವಿದೆ. ಮೇ 13 ರಂದು ಕುಮಾರಸ್ವಾಮಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ