ಜಮ್ಮು- ಕಾಶ್ಮೀರದಲ್ಲಿ ರಾಸಾಯನಿಕ ದಾಳಿ ನಡೆಸಿದ ಪಾಕಿಸ್ತಾನ

ಜಮ್ಮು-ಕಾಶ್ಮೀರ:

ಪಾಕಿಸ್ತಾನದ ಡ್ರೋನ್ ಬುಧವಾರ ಜಮ್ಮು ಕಾಶ್ಮೀರದಲ್ಲಿ ಪ್ರದೇಶದಲ್ಲಿ ಗ್ರೆನೇಡ್‌ಗಳು, ಐಇಡಿ, ಪಿಸ್ತೂಲ್ ಮತ್ತು ಮದ್ದುಗುಂಡುಗಳನ್ನು ಎಸೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಪಾಕಿಸ್ತಾನದ ಡ್ರೋನ್ ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೆನೇಡ್, ಐಇಡಿ, ಪಿಸ್ತೂಲ್, ಮದ್ದುಗುಂಡುಗಳನ್ನು ಬೀಳಿಸಿದೆ.

ಅಷ್ಟೇ ಅಲ್ಲ, ಇದೇ ಮೊದಲ ಬಾರಿಗೆ ದ್ರವರೂಪದಲ್ಲಿ ರಾಸಾಯನಿಕವನ್ನು ಡ್ರೋನ್​ ಮೂಲಕ ಭಾರತದ ಭೂಮಿಯೊಳಗೆ ಬೀಳಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಭಯೋತ್ಪಾದಕ ಚಟುವಟಿಕೆಗಳ ತಾಣವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಕದಡಲು ಪಾಕಿಸ್ತಾನ ಹಲವು ರೀತಿಯ ತಂತ್ರಗಳನ್ನು ಹೂಡುತ್ತಿದೆ ಎಂದು ಗುರುವಾರ ಜಮ್ಮು-ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದು, ಡ್ರೋನ್ ಮೂಲಕ ಕುಕೃತ್ಯಗಳನ್ನು ಜರುಗಿಸುತ್ತಿದೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಪಾಕಿಸ್ತಾನ ದೀರ್ಘಕಾಲದಿಂದ ಇಲ್ಲಿ ಕಾಪಾಡಿಕೊಂಡಿರುವ ಶಾಂತಿಯನ್ನು ಕದಡಲು ಬಯಸುತ್ತಿದೆ. ಭಾರತದ ಭೂಮಿಯೊಳಗೆ ಬೀಳಿಸಲಾಗಿರುವ ರಾಸಾಯನಿಕದ ಯಾವುದು?, ಅದರ ಉಪಯೋಗಗಳೇನು?, ಆ ರಾಸಾಯನಿಕದ ಮೂಲಕ ಯಾವ ರೀತಿ ಹಾನಿ ಮಾಡಬಹುದು? ಎಂಬ ಬಗ್ಗೆ ವಿಶ್ಲೇಷಣೆ ನಡೆಸಲಾಗುತ್ತಿದೆ ಎಂದು ದಿಲ್ಬಾಗ್ ಸಿಂಗ್ ಹೇಳಿದ್ದಾರೆ.

ಮಾದಕ ವಸ್ತುಗಳು ಮತ್ತು ಶಸ್ತ್ರಾಸ್ತ್ರಗಳನ್ನು ಈ ಪ್ರದೇಶಕ್ಕೆ ಕಳುಹಿಸಲಾಗುತ್ತಿದೆ. ಮಾದಕ ವಸ್ತುಗಳ ಮಾರಾಟದಿಂದ ಬಂದ ಹಣವನ್ನು ಭಯೋತ್ಪಾದನೆಗೆ ಬಳಸಲಾಗುತ್ತದೆ ಎಂದು ದಿಲ್ಬಾಗ್ ಸಿಂಗ್ ತಿಳಿಸಿದ್ದು, ಮಾದಕ ದ್ರವ್ಯಗಳ ಸಾಗಾಟ ನಮಗೆ ಹೊಸ ಸವಾಲಾಗಿದ್ದು, ಇದನ್ನು ನಿಯಂತ್ರಿಸಲು ಹೊಸ ಪ್ರತಿತಂತ್ರಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದಿದ್ದಾರೆ.

              ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap