ಬೆಂಗಳೂರಿನಲ್ಲಿ ಪಾಕಿಸ್ತಾನ ಪ್ರಜೆಗಳು : ನೆಲೆಸಲು ಸಹಾಯ ಮಾಡಿದ್ದ ಆರೋಪಿಯ ಬಂಧನ

ಬೆಂಗಳೂರು

    ಅಕ್ರಮವಾಗಿ ಭಾರತದೊಳಗೆ ನುಸುಳಲು ಮತ್ತು ಬೆಂಗಳೂರಿನಲ್ಲಿ ನೆಲೆಯೂರಲು ಪಾಕಿಸ್ತಾನಿ ಪ್ರಜೆಗಳಿಗೆ  ಸಹಾಯ ಮಾಡಿದ್ದ ಆರೋಪಿಯನ್ನು ಜಿಗಣಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಉತ್ತರ ಪ್ರದೇಶ ಮೂಲದ 55 ವರ್ಷದ ಪರ್ವೇಜ್​ ಅಹ್ಮದ್​​ ಬಂಧಿತ ವ್ಯಕ್ತಿ. ಹಿಂದೂ ಹೆಸರುಗಳನ್ನಿಟ್ಟುಕೊಂಡು ಬೆಂಗಳೂರಿನಲ್ಲಿ ನೆಲಸಿದ್ದ ಐದಕ್ಕೂ ಹೆಚ್ಚು ಮಂದಿ ಪಾಕಿಸ್ತಾನಿ ಪ್ರಜೆಗಳನ್ನು ಕಳೆದ ವಾರ ಬೆಂಗಳೂರು ಪೊಲೀಸರು ಬಂಧಿಸಿದ್ದರು.

   ಆರೋಪಿಗಳು ದಾಖಲಾತಿಗಳನ್ನು ಹೊಂದಲು ಸಹಾಯ ಮಾಡಿದವರನ್ನು ಪತ್ತೆ ಹಚ್ಚಲು ಜಿಗಣಿ ಪೊಲೀಸರು ಎರಡು ತಂಡಗಳಾಗಿ ಮುಂಬೈ ಮತ್ತು ದೆಹಲಿಗೆ ತೆರಳಿದ್ದರು. ಇದೀಗ, ಜಿಗಣಿ ಪೊಲೀಸರು ಪಾಕಿಸ್ತಾನಿ ಪ್ರಜೆಗಳು ಭಾರತೀಯ ದಾಖಲಾತಿ ಹೊಂದಲು ಸಹಾಯ ಮಾಡಿದ ಪರ್ವೇಜ್​​ ಅಹ್ಮದ್​ನನ್ನು ಮುಂಬೈನಲ್ಲಿ ಬಂಧಿಸಿದ್ದಾರೆ. ​​ಬಂಧಿತ ಆರೋಪಿಗಳು ಅಂತರಾಷ್ಟ್ರೀಯ ಮೆಹದಿ ಫೌಂಡೇಶನ್​ನೊಂದಿಗೆ ಸಂಪರ್ಕ ಹೊಂದಿದ್ದಾರೆ. ಬಂಧಿತ ಪಾಕಿಸ್ತಾನ ಪ್ರಜೆಗಳ ವಿಚಾರಣೆ ವೇಳೆ ಮತ್ತಷ್ಟು ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಪಾಕಿಸ್ತಾನದಿಂದ 15ಕ್ಕೂ ಹೆಚ್ಚು ಜನ ಭಾರತಕ್ಕೆ ಅಕ್ರಮವಾಗಿ ನುಸುಳಿ ಬಂದಿರುವುದು ಗೊತ್ತಾಗಿದೆ. ಹದಿನೈದಕ್ಕೂ ಅಧಿಕ ಮಂದಿ ಮೆಹದಿ ಫೌಂಡೇಷನ್ ಸೇರಿದ್ದರು. ಇವರೆಲ್ಲ ಯೂನಸ್ ಅಲ್ಗೋರ್ ಧರ್ಮ ಗುರುಗಳ ಪರ ಪ್ರಚಾರಕ್ಕಾಗಿ ಆಗಮಿಸಿದ್ದಾರೆ ಎನ್ನಲಾಗಿದೆ.

Recent Articles

spot_img

Related Stories

Share via
Copy link