ದೆಹಲಿ :
ಕೇಂದ್ರಿಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಆಧಾರ್ ಜೊತೆ ಪ್ಯಾನ್ ಕಾರ್ಡ್ ನ್ನು ಲಿಂಕ್ ಮಾಡುವ ಗಡುವನ್ನು ಡಿಸೆಂಬರ್ 31ರವರೆಗೆ ವಿಸ್ತರಣೆ ಮಾಡಿದೆ.
ಪ್ಯಾನ್ ಆಧಾರ್ ಲಿಂಕ್ ಸಂಬಂಧಿಸಿದಂತೆ ಹಣಕಾಸು ಸಚಿವಾವಲಯ ಆದೇಶ ಹೊರಡಿಸಿದೆ. ಈ ಮೊದಲು ಆದಾಯ ತೆರಿಗೆ ಇಲಾಖೆಯು ಮಾಧ್ಯಮಗಳಿಗೆ ನೀಡಿದ್ದ ಜಾಹೀರಾತಿನಲ್ಲಿ ಸೆಪ್ಟೆಂಬರ್ 30ರೊಳಗೆ ಆಧಾರ್-ಪ್ಯಾನ್ ಲಿಂಕ್ ಮಾಡಿಸಲು ಸೂಚಿಸಲಾಗಿತ್ತು. ಇದೀಗ ಪ್ಯಾನ್ – ಆಧಾರ್ ಲಿಂಕ್ ಗಡುವನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಲಾಗಿದೆ.
ಆಧಾರ್ ನೊಂದಿಗೆ ಪ್ಯಾನ್ ಲಿಂಕ್ ಮಾಡದಿದ್ದರೆ ತೆರಿಗೆ ಪಾವತಿ, ಬ್ಯಾಂಕಿಂಗ್, ಹಣಕಾಸು ವ್ಯವಹಾರಗಳಿಗೆ ತೊಡಕುಗಳುಂಟಾಗಬಹುದು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ