ನವದೆಹಲಿ:
ಇಂದು ಸಂಜೆ 7 ಗಂಟೆಗೆ ಕೆಂಪುಕೋಟೆಯಿಂದ ಆರಂಭವಾಗುವ ಲೋಕತಂತ್ರ ಬಚಾವೋ ಪಂಜಿನ ಮೆರವಣಿಗೆಯಲ್ಲಿ ಕಾಂಗ್ರೆಸ್ ಸಂಸದರು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಮಂಗಳವಾರ ಹಳೆ ದೆಹಲಿಯ ಚಾಂದಿನಿ ಚೌಕ್‌ನಲ್ಲಿರುವ ಕೆಂಪು ಕೋಟೆಯಿಂದ ಟೌನ್ ಹಾಲ್ ವರೆಗೆ ಪಂಜಿನ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಿದೆ.
ಮೆರವಣಿಗೆಯಲ್ಲಿ ಪಕ್ಷದ ಸಂಸದರು ಕೈಯಲ್ಲಿ ಉರಿಯುವ ಪಂಜು ಹಿಡಿದು ಸಾಗಲಿದ್ದಾರೆ ಎಂದು ಅವರು ಹೇಳಿದ್ದಾರೆ. ರಾಹುಲ್ ಗಾಂಧಿ ಅವರ ಅನರ್ಹತೆಯ ವಿರುದ್ಧ ಬೀದಿಗಿಳಿಯುವುದಾಗಿ ಮತ್ತು ಈ ವಿಷಯದ ಬಗ್ಗೆ ಜನರ ಬಳಿ ಹೋಗುವುದಾಗಿ ಕಾಂಗ್ರೆಸ್ ಹೇಳಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
