ಹರಪನಹಳ್ಳಿ :
ವಿಜಯನಗರ ಜಿಲ್ಲೆಯ ಹರಪನಹಳ್ಳಿ ಶ್ರೀಮೈಲಾರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಗೊರವಪ್ಪ ಕೋಟೆಪ್ಪ ಕಾರ್ಣಿಕ ನುಡಿದಿದ್ದು, `ಅಂಬ್ಲಿರಾಶಿಗೆ ಮುತ್ತಿನ ಗಿಣಿ ಸಂಪಾದೀತಲೇ ಪರಾಕ್’ ಎಂದು ಕಾರ್ಣಿಕ ನುಡಿದಿದ್ದಾರೆ.
ಹರಪನಹಳ್ಳಿ ಹೊರ ವಲಯದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರತಿವರ್ಷ ಭರತ ಹುಣ್ಣಿಮೆ ದಿನ ನಡೆದ ಕಾರ್ಣಿಕ ನಡೆಯಿತು.
ಗೊರವಪ್ಪ ಕೋಟೆಪ್ಪ `ಅಂಬ್ಲಿರಾಶಿಗೆ ಮುತ್ತಿನ ಗಿಣಿ ಸಂಪಾದೀತಲೆ ಪರಾಕ್’ ಎಂದು ಕಾರ್ಣಿಕ ನುಡಿದಿದ್ದಾರೆ. ಈ ಬಾರಿ ಕಾರ್ಣಿಕ ನುಡಿ ರಾಜ್ಯದಲ್ಲಿ ಸಮೃದ್ಧ ಮಳೆ, ಬೆಳೆಯಾಗಲಿದೆ ಎಂಬ ಅರ್ಥ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
