ಟೋಕಿಯೊ:
ಭಾರತದ ಲೇಖರ ಟೋಕಿಯೊ ಒಲಿಂಪಿಕ್ಸ್ ನ 10ಮೀ. ಏರ್ ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲೇ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
19 ವರ್ಷದ ಅವನಿ ಒಟ್ಟು 249.6 ಅಂಕಗಳನ್ನು ಗಳಿಸುವ ಮೂಲಕ ಪ್ಯಾರಲಿಂಪಿಕ್ ಇತಿಹಾಸದಲ್ಲಿ ಹೊಸ ದಾಖಲೆಯನ್ನು ಬರೆದಿದ್ದಾರೆ.
ಪ್ಯಾರಲಿಂಪಿಕ್ ನಲ್ಲಿ ಇದುವರೆಗೆ ಚಿನ್ನ ಗೆದ್ದ ಭಾರತೀಯ ಆಟಗಾರರಲ್ಲಿ ಅವನಿ ಲೆಖಾರಾ ನಾಲ್ಕನೆಯವರಾಗಿದ್ದಾರೆ. ಈ ಹಿಂದಿನ ಪ್ಯಾರಲಿಂಪಿಕ್ ನಲ್ಲಿ ಭಾರತದ ಕ್ರೀಡಾಪಟುಗಳಾದ ಈಜುಗಾರ ಮುರಳಿಕಾಂತ್ ಪೆಟ್ಕರ್(1972ರಲ್ಲಿ), ಜಾವೆಲಿನ್ ಥ್ರೋವರ್ ದೇವೇಂದ್ರ ಜಾಜರಿಯಾ(2004 ಮತ್ತು 2016ರಲ್ಲಿ) ಮತ್ತು ಹೈಜಂಪ್ ನಲ್ಲಿ 2016ರಲ್ಲಿ ತಂಗವೇಲು ಮರಿಯಪ್ಪನ್ ಚಿನ್ನದ ಪದಕ ಗಳಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ