ತುಮಕೂರು
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡ ಅವರು 2019 ರ ತುಮಕೂರು ಲೋಕಸಭಾ ಚುನಾವಣಾ ಸೋಲನ್ನು ನೆನಪು ಕಣ್ಣೀರು ಹಾಕಿದ್ದು, ನನ್ನ ಸೋಲಿಗೆ ಜಿಲ್ಲೆಯ ಕಾಂಗ್ರೆಸ್ ನಾಯಕರೇ ಕಾರಣ ಎಂದು ದೂರಿದ್ದಾರೆ.
ಈ ಕುರಿತು ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಮಾತನಾಡಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಬಗ್ಗೆ ನನಗೆ ಅಪಾರವಾದ ಗೌರವವಿದೆ, ಅವರನ್ನು ಸೋಲಿಸಿದ್ದು ನಾನಲ್ಲ. ನನ್ನ ಕ್ಷೇತ್ರದಲ್ಲಿ ಅವರಿಗೆ ಹೆಚ್ಚಿನ ಮುನ್ನಡೆ ನೀಡಿದ್ದೆವು ಎಂದು ಸ್ಪಷ್ಟಪಡಿಸಿದ್ದಾರೆ.
2019 ರ ಲೋಕಸಭೆ ಚುನಾವಣೆಯ ವೇಳೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೇ ಸ್ವತಃ ತುಮಕೂರು ಜಿಲ್ಲೆಯನ್ನ ಆರಿಸಿಕೊಂಡ ಸ್ಪರ್ಧೆ ಮಾಡಿದ್ದರು. ನನ್ನ ಕೊರಟಗೆರೆ ಕ್ಷೇತ್ರದಲ್ಲಿ ಮಾಜಿ ಪ್ರಧಾನಿಗೆ ಅತಿ ಹೆಚ್ಚಿನ ಲೀಡ್ ನೀಡಿದ್ದೇವೆ. ಜೆಡಿಎಸ್ ಪಕ್ಷದ ಶಾಸಕರಿರುವ ಕ್ಷೇತ್ರಗಳಲ್ಲೇ ಕಡಿಮೆ ಮತಗಳು ಬಂದಿವೆ. ಅದಕ್ಕೆಲ್ಲಾ ಯಾರು ಜವಾಬ್ದಾರಿ ಎಂದು ಕೇಳಿದರು.
ಈ ವಿಚಾರವಾಗಿ ನನ್ನ ಕ್ಷೇತ್ರದಲ್ಲಿ ಎಷ್ಟು ಮತಗಳು ಬಂದಿವೆ ಎಂಬ ಬಗ್ಗೆ ಅಂಕಿಅಂಶದ ಮಾಹಿತಿ ಪಡೆದುಕೊಳ್ಳಲಿ. ನನಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೇಲೆ ಅಪಾರ ಗೌರವಿದೆ. ಅವರಿಗೆ ಕಣ್ಣೀರು ಹಾಕಿಸುವ ಕೆಲಸ ಮಾಡಿಲ್ಲ. ಜೆಡಿಎಸ್ ಪಕ್ಷದ ನಾಯಕರ ಆಂತರಿಕ ಕಲಹದಿಂದ ಅವರ ಶಾಸಕರೇ ಇರುವಂತಹ ಕ್ಷೇತ್ರಗಳಲ್ಲಿ ಹೆಚ್ಚಿನ ಲೀಡ್ ಬಂದಿಲ್ಲ. ಅದರ ಬಗ್ಗೆ ಸಿಎಂ ಇಬ್ರಾಹಿಂ ಅವರು ಮಾತನಾಡಬೇಕಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ