ತುಮಕೂರಿನಲ್ಲಿ ವಿಮಾನ ನಿಲ್ದಾಣ‌ ಸ್ಥಾಪಿಸಿದರೆ ಅನುಕೂಲವಾಗಲಿದೆ : ಡಾ. ಜಿ ಪರಮೇಶ್ವರ್‌

ಬೆಂಗಳೂರು:

   ಬೆಂಗಳೂರಿನ ಭಾಗವಾಗಿ ತುಮಕೂರು ಬೆಳೆಯುತ್ತಿದ್ದು, ಅಲ್ಲಿ ವಿಮಾನ ನಿಲ್ದಾಣ‌ ಸ್ಥಾಪಿಸಿದರೆ ಅನುಕೂಲವಾಗಲಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

   ನಗರದಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ತುಮಕೂರು ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು. ತುಮಕೂರಿನವರೆಗೂ ಮೆಟ್ರೋ ರೈಲು ವಿಸ್ತರಣೆಗೂ ಪ್ರಸ್ತಾವನೆ ಸಲ್ಲಿಸಲಾಗಿದೆ.‌ ತುಮಕೂರನ್ನು ಗ್ರೇಟರ್ ಬೆಂಗಳೂರು ಎಂದು ಕರೆಯಬಹುದು. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು‌, 20 ಸಾವಿರ ಎಕರೆ ಜಾಗದಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ತುಮಕೂರಿನಲ್ಲಿ ನಿರ್ಮಾಣವಾಗುತ್ತಿದೆ.

   ಮೊದಲ ಮತ್ತು ಎರಡನೇ ಹಂತದ ಕಾಮಗಾರಿ ಮುಗಿದಿದೆ. ಅಲ್ಲದೇ, 150 ಕೈಗಾರಿಕೆಗಳು ಹಾಗೂ ಜಪಾನ್ ಟೌನ್‌ಶಿಪ್ ಬರುತ್ತಿದೆ. ಎಚ್‌ಎಎಲ್ ಹೆಲಿಕ್ಯಾಪ್ಟರ್ ಫ್ಯಾಕ್ಟರಿ ಕೆಲಸ ಆರಂಭಿಸಿದೆ, ಹಲವು ಕೈಗಾರಿಕೆಗಳು ಸಹ ತುಮಕೂರಿಗೆ ಬರುತ್ತಿವೆ. ಹೀಗಾಗಿ ಇವೆಲ್ಲಾವನ್ನು ಗಮನದಲ್ಲಿಟ್ಟುಕೊಂಡು, ವಿಮಾನ ನಿಲ್ದಾಣ ಮಾಡಿದರೆ ಉತ್ತಮ ಎಂದು ಕೇಳಿದ್ದೇವೆ. ತಾಂತ್ರಿಕ ಅನುಕೂಲತೆ ಆಧಾರದಲ್ಲಿ ಮಾಡಬೇಕು ಅಂತಿದ್ದಾರೆ, ನೋಡೋಣ ಎಂದರು,

   ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಸಹೋದರ ಗೋಪಾಲ್​ ಜೋಶಿಗಾಗಿ ಹುಡುಕಾಟ ನಡೆಯುತ್ತಿದೆ, ವಂಚನೆಯಂತ ಕೇಸ್​ಗಳು ಬಂದಾಗ ಗಂಭೀರವಾಗಿಯೇ ತೆಗೆದುಕೊಳ್ಳಲಾಗುತ್ತದೆ. ಈಗಾಗಲೇ ಅವರಿಗಾಗಿ ಹುಡುಕಾಟ ನಡೆಯುತ್ತಿದೆ, ಅವರಿನ್ನೂ ಸಿಕ್ಕಿಲ್ಲ, ಬಂಧಿತರನ್ನು ವಿಚಾರಣೆ ನಡೆಸಿ, ಹೇಳಿಕೆ ಪಡೆದಾಗ ಯಾರಿದ್ದಾರೆ ಎಂಬುದು ಗೊತ್ತಾಗುತ್ತದೆ. ತನಿಖೆಗೆ ಮೊದಲು ಹೇಳುವುದು ಸರಿಯಲ್ಲ ಎಂದರು

Recent Articles

spot_img

Related Stories

Share via
Copy link