ಸಚಿವ ಸ್ಥಾನ ತ್ಯಾಗ ವಿಚಾರ : ಹೈಕಮಾಂಡ್‌ ನಿರ್ಧಾರವೇ ಅಂತಿಮ: ಡಾ ಜಿ ಪರಮೇಶ್ವರ್‌

ತುಮಕೂರು:

    ಹೈಕಮಾಂಡ್ ಯಾರಿಗೆ ಸಚಿವ ಸ್ಥಾನ ಬಿಟ್ಟುಕೊಡಬೇಕು ಅನ್ನುತ್ತೋ ಅವರಿಗೆ ಬಿಟ್ಟು ಕೊಡುತ್ತೇನೆ. ಒಟ್ಟಿನಲ್ಲಿ ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬ ಬಿಜೆಪಿ ನಾಯಕರೂ ನಮ್ಮ ಬಗ್ಗೆ ಮಾತ್ರ ಮಾತಾಡ್ತಾರೆ. ಅವರ ಪಕ್ಷದ ವಿಚಾರವಾಗಿ ಹೆಚ್ಚು ತಲೆಕೆಡಿಸಿಕೊಳ್ಳಲ್ಲ. ಅವರಿಗೆ ನಮ್ಮ ಪಕ್ಷದ ಮೇಲೆ ಹೆಚ್ಚು ಆಸಕ್ತಿ ಇದ್ದಂತೆ ಇದೆ. ಅವರೆಲ್ಲ ನಮ್ಮ ಪಕ್ಷಕ್ಕೆ ಬರ್ತಾರೇನೋ?. ಅದಕ್ಕಾಗಿ ನಮ್ಮ ಪಕ್ಷದ ಬಗ್ಗೆ ಹೆಚ್ಚು ಚರ್ಚೆ ನಡೆಸ್ತಿದ್ದಾರೇನೋ ಎಂದು ಪ್ರಶ್ನಿಸಿದರು.

     ಕಾಂಗ್ರೆಸ್‍ನಲ್ಲಿ ಇನ್ನೆರಡು ಡಿಸಿಎಂ ಸ್ಥಾನಗಳ ಸೃಷ್ಟಿಗೆ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೂರು ಡಿಸಿಎಂ ಚರ್ಚೆ ಹಳೇದಾಯ್ತು ಅನ್ಕೊಂಡಿದ್ದೆ. ಯಾರಿಗೆ ಯಾವ ಹುದ್ದೆ ಕೊಡಬೇಕು ಅಂತ ಹೈಕಮಾಂಡ್ ನಿರ್ಧಾರ ಮಾಡುತ್ತೆ. ಯಾವ ಸಂದರ್ಭಸಲ್ಲಿ ಹುದ್ದೆ ಕೊಡಬೇಕು ಅಂತ ಹೈಕಮಾಂಡ್ ತೀರ್ಮಾನ ತಗೊಳ್ಳುತ್ತೆ ಎಂದು ತಿಳಿಸಿದರು.

     ಇದೇ ವೇಳೆ ಮಂತ್ರಿ ಸ್ಥಾನಕ್ಕೆ ಹಲವು ಶಾಸಕರ ಆಗ್ರಹ ವಿಚಾರದ ಕುರಿತು ಮಾತನಾಡಿ, ಎಲ್ಲರೂ ಮಂತ್ರಿ ಆಗೋದು ಒಳ್ಳೆಯದೇ. ಹೈಕಮಾಂಡ್ ನವ್ರೇ ಇದರ ಬಗ್ಗೆ ನಿರ್ಧಾರ ಮಾಡುತ್ತೆ. ಹೈಕಮಾಂಡ್ ಯಾರಿಗೆ ಸಚಿವ ಸ್ಥಾನ ಬಿಟ್ಕೊಡಿ ಅಂದ್ರೂ ಬಿಟ್ಕೊಡ್ತೇನೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಅಂದ್ರು.

    ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲು ಹೋರಾಟ, ಗಡಿಯಲ್ಲಿ ಆತಂಕ ವಿಚಾರದ ಸಂಬಂಧ, ಮಹಾರಾಷ್ಟ್ರ ಗಡಿಯಲ್ಲಿ ಭದ್ರತೆ ಹೆಚ್ಚಳ ಮಾಡಿದ್ದೇವೆ. ಎಲ್ಲೆಲ್ಲಿ ಸೂಕ್ಷ್ಮ ವಾತಾವರಣ ಇದೆಯೋ ಅಲ್ಲಿ ಕೆಎಸ್‍ಆರ್‍ಪಿ ತುಕಡಿ ನಿಯೋಜನೆ ಮಾಡಿದ್ದೇವೆ. ಭದ್ರತಾ ವ್ಯವಸ್ಥೆ ಹೆಚ್ಚಳ ಮಾಡಿದ್ದೇವೆ. ಬೆಳಗಾವಿಯಲ್ಲಿ ಎಂಇಎಸ್ ಕೂಡ ಕರಾಳ ದಿನ ಅಂತ ಮಾಡುತ್ತಿದೆ. ಹಾಗೇನಾದ್ರೂ ಮಾಡಿದ್ರೆ ಅದನ್ನು ತಡೆಯುವ ಕೆಲಸ ಮಾಡ್ತೇವೆ ಎಂದು ಹೇಳಿದರು.

     ಶಾಸಕರ ಹೇಳಿಕೆಗಳ ಬಗ್ಗೆ ಅಧ್ಯಕ್ಷರು ನೋಡಿಕೊಳ್ತಾರೆ. ಅಧ್ಯಕ್ಷರೇ ಅದನ್ನೆಲ್ಲ ನಿಯಂತ್ರಣ ಮಾಡ್ತಾರೆ. ಈಗಾಗಲೇ ಬಹಿರಂಗ ಹೇಳಿಕೆ ಕೊಡಬೇಡಿ ಅಂತ ಅಧ್ಯಕ್ಷರು ಸೂಚಿಸಿದ್ದಾರೆ. ರಮೇಶ್ ಜಾರಕಿಹೊಳಿ ಹೇಳಿಕೆಗಳಿಗೆ ಉತ್ತರ ಕೊಡಕ್ಕಾಗಲ್ಲ. ಪ್ರತಿಯೊಬ್ಬರಿಗೂ ಉತ್ತರ ಕೊಡ್ತಿದ್ರೆ ಕೊನೇ ಇರಲ್ಲ ಎಂದರು.

 

    ಯಾರೆಲ್ಲ ದುಬೈ ಹೋಗ್ತಾರೆ ಅಂತ ಗೊತ್ತಿಲ್ಲ, ನೋಡೋಣ. ಯಾಕೆ ಹೋಗ್ತಿದ್ದಾರೆ ಗೊತ್ತಿಲ್ಲ, ಸುತ್ತಾಡೋಕ್ಕೆ ಹೋಗ್ತಿದ್ದಾರೋ ಏನೋ. ಅಲ್ಲಿ ನಮ್ಮ ಕನ್ನಡ ಸಂಘಗಳಿವೆ, ಅವರೇನಾದರೂ ಕರೆದಿದ್ದಾರಾ ಇಲ್ವಾ ಅಂತ ನೋಡಬೇಕು ಎಂದು ಸತೀಶ್ ಜಾರಕಿಹೊಳಿ ಬಣದಿಂದ ದುಬೈ ಪ್ರವಾಸದ ಕುರಿತು ಪರಂ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap