ತುಮಕೂರು:
ನಮ್ಮ ಕಾಲೇಜಿಗೆ ಬಂದು ಅಕೌಂಟ್ಸ್ ಮಾಹಿತಿ ಕೇಳಿದ್ದಾರೆ. ಆ ಮಾಹಿತಿಯನ್ನು ನಾವು ನೀಡಿದ್ದೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.ಜಾರಿ ನಿರ್ದೇಶನಾಲಯದ ದಾಳಿಯ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಇಡಿ ಅಧಿಕಾರಿಗಳು ಯಾವುದೇ ಮಾಹಿತಿ ಕೇಳಿದರೂ ನೀಡಿ ಎಂದು ನಮ್ಮ ಸಿಬ್ಬಂದಿಗೆ ತಿಳಿಸಿದ್ದೇನೆ ಎಂದರು.
ನಿನ್ನೆ ಇಡಿ ದೆಹಲಿಯ ಅಧಿಕಾರಿಗಳು ನಮ್ಮ ಮೂರು ಕಾಲೇಜುಗಳಿಗೆ ಭೇಟಿ ಕೊಟ್ಟಿದ್ದಾರೆ. ಅವರಿಗೆ ಏನು ಸೂಚನೆ ಬಂದಿದೆಯೋ ಗೊತ್ತಿಲ್ಲ. ಅವರು ಕೇಳಿದ ದಾಖಲೆಗಳನ್ನು ನಾವು ಕೊಡುತ್ತೇವೆ ಎಂದು ತಿಳಿಸಿದರು.ಇಡಿ ದಾಳಿಯ ಉದ್ದೇಶ ಗೊತ್ತಿಲ್ಲ. ಅವರಿಗೆ ಸಹಕಾರ ನೀಡುತ್ತೇನೆ. ನಾನು ಯಾವುದನ್ನು ಮುಚ್ಚಿಟ್ಟಿಲ್ಲ. ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ನಾನು ಕಾನೂನಿಗೆ ಗೌರವ ಕೊಡುತ್ತೇನೆ. ಇಡಿ ಅಧಿಕಾರಿಗಳಿಗೆ ಎಲ್ಲಾ ರೀತಿಯ ಸಹಕಾರ ಕೊಡುತ್ತೇನೆ ಎಂದು ಹೇಳಿದರು.
