ಬೆಂಗಳೂರು
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಸಂತ್ರಸ್ತೆ ತಾಯಿ ನೀಡಿರುವ ದೂರಿನಡಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಈ ಸಂಬಂಧ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಇದೊಂದು ಸೂಕ್ಷ್ಮ ವಿಷಯ, ಹೀಗಾಗಿ ಅಗತ್ಯ ಬಿದ್ದರೆ ಮಹಿಳೆಗೆ ರಕ್ಷಣೆ ಕೊಡ್ತೀವಿ ಎಂದು ಹೇಳಿದ್ದಾರೆ.
ಪ್ರಕರಣ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜೊಇ. ಪರಮೇಶ್ವರ್ ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ ಅದನ್ನು ಪರಿಶೀಲಿಸಿ ಕೇಸ್ ರಿಜಿಸ್ಟರ್ ಮಾಡಿದ್ದಾರೆ. ಪೊಲೀಸರು ಅದರ ಬಗ್ಗೆ ತನಿಖೆ ಮಾಡ್ತಿದ್ದಾರೆ. ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸೋಕೆ ಆಗಲ್ಲ. ಇದು ಒಬ್ಬ ಮಾಜಿ ಸಿಎಂ ವಿಷಯಕ್ಕೆ ಸಂಬಂಧಿಸಿದ ಕೇಸ್ ಆಗಿರುವುದರಿಂದ ಬಹಳ ಸೂಕ್ಷ್ಮ ವಿಷಯ. ಹೀಗಾಗಿ ಅಗತ್ಯ ಬಿದ್ದರೆ ಮಹಿಳೆಗೆ ರಕ್ಷಣೆ ಕೊಡ್ತೀವಿ ಎಂದು ಹೇಳಿದ್ದಾರೆ.
ಅಲ್ಲದೇ ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ಅವರು ಯಾರೋ ಮಹಿಳೆ ದೂರು ಕೊಟ್ಟಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡ್ತಿದ್ದಾರೆ. ಈ ಬಗ್ಗೆ ಬಗ್ಗೆ ಡಿಸಿಎಂ ಹಾಗೂ ಸಿಎಂ ಜೊತೆಗೂ ಚರ್ಚೆ ಮಾಡಿದ್ದು, ಮುಖ್ಯಮಂತ್ರಿ ಗಳು ಕೂಡ ಇದರ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದಿದ್ದಾರೆ.
ಆ ಮಹಿಳೆ ಮಾನಸಿಕ ಅಸ್ವಸ್ಥೆ ಅಂತಾ ಹೇಳ್ತಾರೆ. ಅಲ್ಲದೇ ಆಕೆ ದೂರನ್ನು ಟೈಪ್ ಮಾಡಿ ಕೊಟ್ಟಿದ್ದಾರೆ, ಆದರೆ ಕೈಯಿಂದ ಬರೆದು ದೂರು ಕೊಟ್ಟಿದ್ದಲ್ಲ. ಟೈಪ್ ಕಾಪಿ ಕೊಟ್ಟಿದ್ದಾರೆ ಎಂದು ಅಧಿಕಾರಿಗಳು ನನಗೆ ಹೇಳಿದ್ದಾರೆ. ಒಬ್ಬ ಮಾಜಿ ಸಿಎಂ ವಿಷಯವಿದು, ಯಾವುದೇ ವಿಷಯ ಆದರೂ ಬಹಳ ಎಚ್ಚರಿಕೆ ಯಿಂದ ಹೇಳಬೇಕಾಗುತ್ತದೆ ಎಂದಿದ್ದಾರೆ.
ಇನ್ನು ಬಿಎಸ್ವೈ ಅವರನ್ನು ವಶಕ್ಕೆ ಪಡೆಯುವ ಬಗ್ಗೆಯೂ ಪ್ರತಿಕ್ರಿಯಿಸಿರುವ ಗೃಹ ಸಚಿವರು ತನಿಖೆಯ ಮೇಲೆ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.