ಬೆಂಗಳೂರು ಗ್ರಾಮಾಂತರದಲ್ಲಿ ಅರೆಸೇನಾ ಪಡೆ ನಿಯೋಜನೆ ….!

ಬೆಂಗಳೂರು: 

    ಏಪ್ರಿಲ್ 26 ರಂದು ಕರ್ನಾಟಕ ಮೊದಲ ಹಂತದ ಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರು ಕ್ಷೇತ್ರಗಳ ಎಲ್ಲಾ ಮತಗಟ್ಟೆಗಳನ್ನು ವೆಬ್‌ಕಾಸ್ಟ್ ಮಾಡಲಾಗುವುದು ಎಂದು ಚುನಾವಣಾ ಆಯೋಗ ಬುಧವಾರ ತಿಳಿಸಿದೆ.

   ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಇಲ್ಲಿಯವರೆಗೆ, ಮಾದರಿ ನೀತಿ ಸಂಹಿತೆಯಡಿ ಪ್ರಮುಖ ಉಲ್ಲಂಘನೆಗಳಿಗಾಗಿ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳ ವಿರುದ್ಧ ಒಟ್ಟು 189 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದರು.

   ಶುಕ್ರವಾರ ಮೊದಲ ಹಂತದಲ್ಲಿ ಮತದಾನ ನಡೆಯಲಿರುವ 14 ಕ್ಷೇತ್ರಗಳ 30,602 ಮತಗಟ್ಟೆಗಳಲ್ಲಿ 4 ಲಕ್ಷ ಮತಗಟ್ಟೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ. ಅವರಲ್ಲದೆ, 5,000 ಮೈಕ್ರೋ ಅಬ್ಸರ್ವರ್‌ಗಳು, 50,000 ಸಿವಿಲ್ ಪೊಲೀಸ್ ಸಿಬ್ಬಂದಿ, 65 ಅರೆಸೇನಾ ಪಡೆ ತುಕಡಿ ಮತ್ತಿತರ ರಾಜ್ಯಗಳ ಸಶಸ್ತ್ರ ಪೊಲೀಸ್ ಪಡೆಯನ್ನೂ ಈ ಮತಗಟ್ಟೆಗಳಲ್ಲಿ ಭದ್ರತೆಗೆ ನಿಯೋಜಿಸಲಾಗುವುದು ಎಂದರು.

    ‘ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎಲ್ಲಾ 2,829 ಮತಗಟ್ಟೆಗಳನ್ನು ಶೇಕಡಾ 100ರಷ್ಟು ವೆಬ್‌ಕಾಸ್ಟ್ ಮಾಡಲಾಗುವುದು. ಚುನಾವಣಾಧಿಕಾರಿಗಳು ಮತ್ತು ವೀಕ್ಷಕರ ಕೋರಿಕೆಯಂತೆ ಈ ಕ್ಷೇತ್ರದಲ್ಲಿ ಎರಡು ಪಟ್ಟು ಅರೆಸೇನಾಪಡೆ ನಿಯೋಜಿಸಲಾಗುವುದು, ಏಪ್ರಿಲ್ 22 ರಿಂದ ಏಳು ಅರಸೇನಾ ಪಡೆ ತುಕಡಿಯನ್ನು ಕ್ಷೇತ್ರಕ್ಕೆ ಕರೆಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು

   ಮೊದಲ ಹಂತದಲ್ಲಿ ಚುನಾವಣೆ ಎದುರಿಸುತ್ತಿರುವ 14 ಕ್ಷೇತ್ರಗಳು: ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ. ಈ ಕ್ಷೇತ್ರಗಳಲ್ಲಿ ಒಟ್ಟು 2,88,19,342 ಮತದಾರರಿದ್ದಾರೆ. ಈ ಪೈಕಿ 1,44,28,099 ಪುರುಷರು, 1,43,88,176 ಮಹಿಳೆಯರು ಮತ್ತು 3,067 ತೃತೀಯಲಿಂಗಿಗಳು ಇದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap